
ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿಕೆ; ಸರ್ಕಾರದ ವಿರುದ್ಧ ರಸ್ತೆಗಿಳಿದ ಮುಸ್ಲಿಂ ಮತ್ತು ದಲಿತ ಸಂಘಟನೆ
ಹುಬ್ಬಳ್ಳಿ: ಸಂವಿಧಾನಬದ್ದ ಮೂಲಭೂತ ಹಕ್ಕು ಆಗಿರುವ ಹಿಜಾಬ್ ಧರಿಸುವುದಕ್ಕೆ ನಿಷೇದ ಹೇರಿರುವ ಸರ್ಕಾರದ ಆದೇಶವನ್ನು ಖಂಡಿಸಿ, ಸಂವಿಧಾನ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿ ಮುಸ್ಲಿಂ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ, ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನೆ ರ್ಯಾಲಿ ಮಾಡುವ ಮುಕಾಂತರ ತಹಶೀಲ್ದಾರರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.