ಹಾಸ್ಟೆಲ್ ವಾರ್ಡನ್ ಗಂಡನ ಕಿರುಕುಳಕ್ಕೆ ವಿದ್ಯಾರ್ಥಿನಿಯರು ಕಂಗಾಲು..!

ಬೆಂಗಳೂರು

ತುಮಕೂರು: ಸರ್ಕಾರಿ ಶಾಲೆಯ ಲೇಡಿಸ್ ಹಾಸ್ಟೆಲ್ ವಾರ್ಡನ್ ಪತಿ ಮಹಾಶಯ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಾರ್ಡನ್ ಪತಿಯ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿಯರು ಕಂಗಾಲಾಗಿದ್ದಾರೆ. ಮಧುಗಿರಿ ಸರ್ಕಾರಿ ಬಾಲಕಿಯರ ಹಾಸ್ಟೆಲ್ ವಾರ್ಡನ್ ನಿವೇದಿತಾ ಪತಿ ರಂಗನಾಥ್, ವಿದ್ಯಾರ್ಥಿನಿಯರ ಕೊಠಡಿಗೆ ಹೋಗಿ ಕಿರುಕುಳ ನೀಡುತ್ತಿದ್ದು, ವಿದ್ಯಾರ್ಥಿನಿಯರ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ.

ಈ ಬಗ್ಗೆ ಪ್ರಶ್ನಿಸಿದರೆ ಪತಿಯ ವರ್ತನೆಗೆ ವಾರ್ಡನ್ ಬೆಂಬಲ ನೀಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಬಾಲಕಿಯರ ವಸತಿ ನಿಲಯದಲ್ಲಿ 40 ವಿದ್ಯಾರ್ಥಿನಿಯರು ವಾಸವಾಗಿದ್ದು, ಬೇಸತ್ತ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆಗೆ ಬಂದಿದ್ದು, ಈ ವೇಳೆ ಅಧಿಕಾರಿಗಳಿಗೂ ಬೆದರಿಕೆ ಹಾಕಿರುವ ರಂಗನಾಥ್, ತಮ್ಮ ಸಮಾಜದ ಜನರ ಮೂಲಕ ಉತ್ತರ ಕೊಡುವುದಾಗಿ ಆವಾಜ್ ಹಾಕಿದ್ದಾನೆ.

 

Leave a Reply

Your email address will not be published.