IAS ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ನೋಟಿಸ್

ಬೆಂಗಳೂರು

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಮೈಸೂರು ಡಿಸಿ ಆಗಿದ್ದ ವೇಳೆ ರೋಹಿಣಿ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಸದ್ಯ ಈಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್ ಜಾರಿ ಮಾಡ ಲಾಗಿದೆ. ಆರೋಪಗಳಿಗೆ ಖುದ್ದು ಹಾಜರಾಗಿ ಉತ್ತರ ನೀಡುವಂತೆ ನೋಟಿಸ್ ನೀಡಲಾಗಿದೆ. ಸರ್ಕಾರದ ಕಾರ್ಯದರ್ಶಿ ಡಾ.ಜೆ.ರ ವಿಶಂಕರ್‌ರಿಂದ ನೋಟಿಸ್ ಜಾರಿಯಾಗಿದ್ದು ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಕಚೇರಿಗೆ ಬಂದು ಉತ್ತರಿಸಲು ಸೂಚಿಸಲಾಗಿದೆ. ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ತನಿಖೆ ನಡೆಸುವಂತೆ ಶಾಸಕ ಸಾ.ರಾ.ಮಹೇಶ್ ದೂರು ನೀಡಿದ್ದರು.

ಈ ಹಿನ್ನೆಲೆ ಸರ್ಕಾರಕ್ಕೆ ಸಮಗ್ರ ವರದಿ ನೀಡುವ ಸಲುವಾಗಿ ಒಟ್ಟು 5 ಗಂಭೀರ ಆರೋಪಗಳ ಬಗ್ಗೆ ಹೇಳಿಕೆ ನೀಡಲು ಸೂಚಿಸಲಾಗಿದೆ. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ವಿಚಾರದಲ್ಲಿ ಕೋಟ್ಯಂತರ ಹಣ ಅಕ್ರಮ, ಪಾರಂಪರಿಕ ಕಟ್ಟಡದಲ್ಲಿ ಅಕ್ರಮ ಈಜುಕೊಳ ನಿರ್ಮಾಣ ಆರೋಪ, ಪಾರಂಪರಿಕ ಡಿಸಿ ನಿವಾಸದಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ನೆಲಹಾಸು, ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ದುರಂತ ವಿಚಾರ ಸೇರಿದಂತೆ ಒಟ್ಟು 5 ಗಂಭೀರ ಆರೋಪಗಳ ಬಗ್ಗೆ ಹೇಳಿಕೆ ನೀಡಲು ಸರ್ಕಾರ ಸೂಚನೆ ನೀಡಿದೆ.

Leave a Reply

Your email address will not be published.