IAS officers transferred.. ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 8 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು

ಬೆಂಗಳೂರು: ಎಂಟು ಮಂದಿ ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ  ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಮ್ಲನ್ ಆದಿತ್ಯ ಬಿಸ್ವಾಸ್ ಅವ​ರನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ರಾಜೇಂದ್ರ ಕೆ‌. ಅವರನ್ನು ಸಹಕಾರಿ ಸಂಘದ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಸುಂದರೇಶ್ ಬಾಬುರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿ.ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ.

ಸುರಲ್ಕರ್ ವಿಕಾಸ್ ಕಿಶೋರ್ ಅವ​ರನ್ನು ಕೆಪಿಎಸ್​ಸಿಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಶಿವಾನಂದ ಕಪಾಶಿ ಅವರನ್ನು ದಾವಣಗೆರೆ ಡಿಸಿಯಾಗಿ ವರ್ಗಾಯಿಸಲಾಗಿದೆ. ಹೊನ್ನಮ್ಮರನ್ನು ಗದಗ ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ. ಆರ್. ಲತಾರನ್ನು ಬೆಂಗಳೂರು ಗ್ರಾಮಾಂತರ ಡಿಸಿಯಾಗಿ ಟ್ರಾನ್ಸಫರ್​​ ಮಾಡಲಾಗಿದ್ದರೆ, ಲೋಖಂಡೇ ಸ್ನೇಹಲ್ ಸುಧಾಕರ್​​ರನ್ನು ಉನ್ನತ ಶಿಕ್ಷಣ ಇಲಾಖೆಯ ಉಪ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

 

Leave a Reply

Your email address will not be published.