IPL 2022 ವೇಳಾ ಪಟ್ಟಿ ಪ್ರಕಟ ಮಾಡಿದ BCCI: ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಹಾಗೂ ಕೋಲ್ಕತಾ ಫೈಟ್

ಕ್ರೀಡೆ

ಮುಂಬೈ: 2022ರ ಐಪಿಎಲ್ ವೇಳಾಪಟ್ಟಿ ಬಿಡುಗಡೆಯಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರನ್ನರ್‌ಅಪ್‌ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ವಾಂಖೆಡೆ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದೆ. ಮಾರ್ಚ್ 26 ರಂದು ಐಪಿಎಲ್ ಆರಂಭವಾಗುತ್ತಿದ್ದು, ಮುಂಬೈ ಮತ್ತು ಪುಣೆಯಲ್ಲಿ ಒಟ್ಟು 70 ಲೀಗ್ ಮತ್ತು 4 ಪ್ಲೇ ಆಫ್ ಪಂದ್ಯಗಳು ನಡೆಯಲಿದೆ. ಒಟ್ಟು 65 ದಿನಗಳ ಕಾಲ ಟೂರ್ನಿ ನಡೆಯಲಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಮುಂಬೈ ನಗರದಲ್ಲಿರುವ ವಾಂಖೆಡೆ ಸ್ಟೇಡಿಯಂ, ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಒಟ್ಟು 20 ಲೀಗ್ ಪಂದ್ಯಗಳು ನಡೆಯಲಿದೆ. ಪುಣೆಯ ಎಮ್‍ಸಿಎ ಅಂತರಾಷ್ಟ್ರೀಯ ಸ್ಟೇಡಿಯಂ ಮತ್ತು ಬ್ರಬೋರ್ನ್ ಕ್ರೀಡಾಂಗಣದಲ್ಲಿ 15 ಪಂದ್ಯ ನಡೆಯಲಿದೆ. ಎಲ್ಲಾ ತಂಡಗಳು ತಲಾ 4 ಪಂದ್ಯಗಳನ್ನು ವಾಂಖೆಡೆ ಮತ್ತು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಆಡಲಿದ್ದು, ತಲಾ 3 ಪಂದ್ಯಗಳನ್ನು ಬ್ರಬೋರ್ನ್ ಮತ್ತು ಎಮ್‍ಸಿಎ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಡಲಿದೆ.

ಮಾರ್ಚ್ 27 ರಂದು ಮೊದಲ ಡಬಲ್‌ ಹೆಡರ್ ಪಂದ್ಯ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಮತ್ತು ಮುಂಬೈ ತಂಡ ಸೆಣಸಾಡಲಿದೆ. ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡ ಎದುರುಬದುರಾಗಲಿದ್ದು, ಈ ಮೂಲಕ ಆರ್​ಸಿಬಿ ತನ್ನ ಅಭಿಯಾನ ಆರಂಭಿಸಲಿದೆ. 12 ಡಬಲ್ ಹೆಡರ್ ಪಂದ್ಯಾಟ ನಡೆಯಲಿದ್ದು, ಮೊದಲ ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾದರೆ, ಎರಡನೇ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ. ಫೈನಲ್ ಪಂದ್ಯ ಮೇ 29 ರಂದು ನಡೆಯಲಿದೆ.

Leave a Reply

Your email address will not be published.