
ಈದ್ಗಾ ಮೈದಾನದಲ್ಲಿ ಬಕ್ರೀದ್ ಪ್ರಾರ್ಥನೆಗೆ ಯಾವುದೇ ಅಡಿಯಿಲ್ಲ – ತುಷಾರ್ ಗಿರಿನಾಥ್
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಬಕ್ರೀದ್ ಪ್ರಾರ್ಥನೆಗೆ ಯಾವುದೇ ಅಡಿಯಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಬಿಬಿಎಂಪಿ ಕಚೇರಿಯಲ್ಲಿ ಮಾತನಾಡಿದ ಅವರು,ಪ್ರತಿ ವರ್ಷದಂತೆ ಈ ವರ್ಷವೂ ಚಾಮರಾಜನಗರ ಈದ್ಗಾ ಮೈದಾನದಲ್ಲಿ ಜುಲೈ 10ಕ್ಕೆ ಮುಸ್ಲಿಂ ಜನಾಂಗದ ಬಕ್ರೀದ್ ಹಬ್ಬದ ಆಚರಣೆಗೆ ಅವಕಾಶ ನೀಡಲಾಗುತ್ತದೆ. ಸುಪ್ರೀಂನಲ್ಲಿ ನಮಾಝ್ಗೆ ಅವಕಾಶವಿದೆ. ಹಬ್ಬದ ಆಚರಣೆಗೆ ರಸ್ತೆ ಕ್ಲೋಸ್ ಮಾಡಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದ.. ಟ್ರಾಫಿಕ್ ಆಗುವಂತೆ ಆಚರಣೆ ಮಾಡುವಂತಿಲ್ಲ. ಸಿಗ್ನಲ್ನಲ್ಲಿ ಚಾಪೆ ಹಾಕುವುದಕ್ಕೆ ಅವಕಾಶವಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ