ಈದ್ಗಾ ಮೈದಾನದಲ್ಲಿ ಯಾವ ಸಂಘ-ಸಂಸ್ಥೆಗಳಿಗೂ ಧ್ವಜಾರೋಹಣಕ್ಕೆ ಅವಕಾಶವಿಲ್ಲ: ಸಚಿವ ಅಶೋಕ್

ಬೆಂಗಳೂರು

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ನಡೆಯಲಿದೆ. ಬೇರೆ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಅಶೋಕ್ ಘೋಷಣೆ ಮಾಡಿದ್ದಾರೆ. ಚಾಮರಾಜಪೇಟೆ ಮೈದಾನದ ಸಂಬಂಧ ಕಂದಾಯ ಸಚಿವ ಅಶೋಕ್​ ನೇತೃತ್ವದ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಾವ ಸಂಘ-ಸಂಸ್ಥೆಗಳಿಗೂ ಧ್ವಜಾರೋಹಣಕ್ಕೆ ಅವಕಾಶವಿಲ್ಲ. ಸ್ಥಳೀಯ ಶಾಸಕ ಜಮೀರ್ ಅಹ್ಮದ್​​ಗೂ ಅವಕಾಶವಿರುವುದಿಲ್ಲ. ಸರ್ಕಾರ ದಿಂದಲೇ ಧ್ವಜಾರೋಹಣ ಮಾಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇವೆ. ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಅಂತಾ ತೀರ್ಪು ಬಂದಿದೆ. ಹೀಗಾಗಿ ನಮ್ಮ ಇಲಾಖೆಯ ಸುಪರ್ದಿಯಲ್ಲೇ ಆಗಸ್ಟ್​ 15ರಂದು ಸಹಾಯಕ ಆಯುಕ್ತರಿಂದಲೇ ಧ್ವಜಾರೋಹಣ ನಡೆಯಲಿದೆ. ಶಿಷ್ಟಾಚಾರದ ಪ್ರಕಾರ ಸ್ಥಳೀಯ ಶಾಸಕ, ಸಂಸದರು ಬರಬಹುದು. ಅಲ್ಲಿ ಭಾರತ ಮಾತಾಕೀ ಜೈ, ವಂದೇ ಮಾತರಂ ಘೋಷಣೆ ಮಾತ್ರ ಕೇಳಿಬರು ತ್ತದೆ. ಬೇರೆ ಯಾವುದೇ ಘೋಷಣೆ ಮಾಡಬಾರದು ಎಂದು ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published.