ಅಕ್ರಮ ಜೂಜಾಟ: ಸಿಸಿಬಿ ಪೊಲೀಸರಿಂದ 11 ಮಂದಿ ಆರೋಪಿಗಳು ಅರೆಸ್ಟ್

ಬೆಂಗಳೂರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜೂಜಾಟ ಆಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹಲಸೂರಿನ ಅಶೋಕ್ ಕಾಂಪ್ಲೆಕ್ಸ್ ನಲ್ಲಿರುವ ಲಾಡ್ಜ್ ಒಂದರಲ್ಲಿ ಆರೋಪಿಗಳು ಅಕ್ರಮವಾಗಿ ಜೂಜಾಟ ಆಡುತ್ತಿದ್ದರು. ಈ ಸಂಬಂಧ ಖಚಿತ ಮಾಹಿತಿ ಪಡೆದ ಪೊಲೀಸರು ಜೂಜಾಟದಲ್ಲಿ ಭಾಗಿಯಾಗಿದ್ದ ಹನ್ನೊಂದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನೂ ಬಂಧಿತರಿಂದ 1 ಲಕ್ಷದ 1 ಸಾವಿರದ 300 ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನೂ ಆರೋಪಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.