ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳ: ಆರೋಗ್ಯ ಸೌಧಗಳಲ್ಲಿ ಮಾಸ್ಕ್ ಕಡ್ಡಾಯ

ಬೆಂಗಳೂರು

ಬೆಂಗಳೂರು: ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳ ಆರೋಗ್ಯ ಸೌಧಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜಧಾನಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿ ಹಾಗೂ ಭೇಟಿ ನೀಡುವ ಸಾರ್ವಜನಿಕರು ಸೇರಿದಂತೆ ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಡಿ. ರಣದೀಪ್ ಸುತ್ತೋಲೆ ಹೊರಡಿಸಿದ್ದಾರೆ.

ಆರೋಗ್ಯ ಸೌಧದ ಆವರಣ ಹಾಗೂ ಕಚೇರಿಯಲ್ಲಿ ಮಾಸ್ಕ್ ಧರಿಸದವರಿಗೆ 250 ರೂಪಾಯಿ ದಂಡ ವಿಧಿಸಲಾಗುವುದು ಎಂದು ಉಲ್ಲೇಖಿಸಿದ್ದಾರೆ. ಈ ನಿಯಮದ ಕುರಿತು ಆರೋಗ್ಯ ಸೌಧದ ಮುಖ್ಯ ಇಂಜಿನಿಯರ್ ಎಲ್ಲ ಹೌಸ್ ಕೀಪಿಂಗ್ ವಿಭಾಗದವರಿಗೆ ಮಾಹಿತಿ ನೀಡಿ, ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

Leave a Reply

Your email address will not be published.