
ಬೆಂಗಳೂರಿನಲ್ಲಿ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆಯರು ಅಂದರ್
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆಯರನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
ನಮ್ಯುಟೆಬಿ ಶರ್ಮಿಯಾ, ನನ್ಫುಕಾ ಫಿಯೊನ ಬಂಧಿತ ಆರೋಪಿತೆಯರಾಗಿದ್ದು, ಇವರು ಆಫ್ರಿಕಾ ಮೂಲದವರು ಎಂದು ಗುರುತಿಸಲಾಗಿದೆ. ಆರೋಪಿತೆ ಮಹಿಳೆಯರು ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬಂದು ಅವಧಿ ಮುಗಿದಿದ್ದರೂ ಕೂಡ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು.
ಅಲ್ಲದೇ ಕಡಿಮೆ ಅವಧಿಯಲ್ಲಿ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದರು. ಈ ಸಂಬಂಧ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿತ ಮಹಿಳೆಯರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನೂ ಬಂಧಿತರಿಂದ 1.5 ಲಕ್ಷ ಮೌಲ್ಯದ ಮಾದಕ ವಸ್ತು ಹಾಗೂ 2 ಮೊಬೈಲ್ ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಇನ್ನೂ ಆರೋಪಿತರಾದ ಮಹಿಳೆಯರ ವಿರುದ್ಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.