
ಬೆಂಗಳೂರಿನಲ್ಲಿ ಹೆಣ್ಣುಮಕ್ಕಳು ಎಷ್ಟು ಸೇಫ್..? ಕಲಿಯಲು ಬರುವ ಹೆಣ್ಣುಮಕ್ಕಳಿಗೆ ನಿಜಕ್ಕೂ ರಕ್ಷಣೆ ಸಿಗ್ತಿದ್ಯಾ…? ಈ ಸ್ಟೋರಿ ನೋಡಿ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಂಗಳೂರಿನ ಈಜಿಪುರದಲ್ಲಿ ನಡೆದಿದೆ. ಮುಂಜಾನೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಕಾಲಿಂಗ್ ಬೆಲ್ ಒತ್ತಿದ್ದಾನೆ.
ಯಾರೋ ಬಂದರು ಎಂದು ವಿದ್ಯಾರ್ಥಿನಿ ಬಾಗಿಲು ತೆರೆದಿದ್ದಾಳೆ. ಏಕಾಏಕಿ ಒಳಗೆ ನುಗ್ಗಿದ ಕಿರಾತಕ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.ವಿದ್ಯಾರ್ಥಿನಿ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ಬಂದು ನೋಡಿದ್ದಾರೆ. ಅಪರಿಚಿತ ವ್ಯಕ್ತಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿವೇಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.