
ಬೆಂಗಳೂರಿನಲ್ಲಿ ನಾಲ್ಕನೇ ಅಲೆ: ನಿನ್ನೆ 1,124 ಮಂದಿಗೆ ಕೋವಿಡ್ ದೃಢ
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 1,124 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 18,15,473 ಕ್ಕೆ ಏರಿಕೆ ಆಗಿದೆ. ನಿನ್ನೆ 953 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 17,92,344 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೂನ್ಯವಾಗಿದೆ. ಸಕ್ರಿಯ ಪ್ರಕರಣಗಳು 6,158 ಇವೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,970 ರಷ್ಟಿದೆ. ಅದರಂತೆ ರಾಜ್ಯದಲ್ಲಿ ನಿನ್ನೆ 25,743 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 1,231 ಮಂದಿಗೆ ಸೋಂಕು ದೃಢಪಟ್ಟಿದೆ.
1047 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 39,35,088 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಸಾವಿನ ಸಂಖ್ಯೆ ಶೂನ್ಯ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 6,603ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.