ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಏರಿಕೆ: ಹೊಸ ನಿಯಮಕ್ಕೆ BBMP ಸಿದ್ಧತೆ ಮಾಡಿಕೊಳ್ಳುತ್ತಾ..!?

ಬೆಂಗಳೂರು

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ 1,137 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,44,811 ಕ್ಕೆ ಏರಿಕೆ ಆಗಿದೆ. ನಿನ್ನೆ 949 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಲ್ಲಿ ಈವರೆಗೂ ಕೋವಿಡ್ ಸಾವಿನ ಸಂಖ್ಯೆ 16,977 ಆಗಿದೆ. ರಾಜಧಾನಿಯಲ್ಲಿ 8,283 ಸಕ್ರಿಯ ಪ್ರಕರಣಗಳಿವೆ. ಅದರಂತೆ ರಾಜ್ಯದಲ್ಲಿ ನಿನ್ನೆ 1,837 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ನಾಲ್ವರು ಸೋಂಕಿತರು ಸಾವಿಗೀಡಾಗಿದ್ದಾರೆ. 29,425 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 1,290 ಮಂದಿ ವೈರಸ್‌ನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ ಒಟ್ಟು 11,898 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪ್ರಮಾಣ ಶೇ.6.24 ಇದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published.