ಜಲಜೀವನ್ ಮಿಷನ್ ಯೋಜನೆಯಲ್ಲಿ ಗುರಿ ಮೀರಿದ ಸಾಧನೆ: ಹರ್ಷ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು

ಬೆಂಗಳೂರು; ಜಲಜೀವನ್ ಮಿಷನ್ ಯೋಜನೆಯಲ್ಲಿ ಗುರಿ ಮೀರಿದ ಸಾಧನೆ ಮಾಡಿದ್ದಕ್ಕೆ ಸಿಎಂ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 8 ರ ವರೆಗೆ ರಾಜ್ಯದಲ್ಲಿ ಒಟ್ಟು 21,63,817 ಮನೆಗಳಿಗೆ ನಳ ಸಂಪರ್ಕದ ಗುರಿ ನಿಗದಿಯಾಗಿತ್ತು. ಆದರೆ 21,81,557 ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲಾಗಿದೆ. ಇದು ನಿಗದಿತ ಗುರಿಗಿಂತಲೂ ಹೆಚ್ವಿನ ಸಾಧನೆಯಾಗಿದೆ.

ಅದರ ಜತೆ ಬ್ಯಾಚ್ 1 ಕಾಮಗಾರಿಗಳನ್ನು ಸೆಪ್ಟೆಂಬರ್ 15 ರೊಳಗೆ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ವಾರದಲ್ಲಿ 3 ದಿನ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಬೇಕೆಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಅವರು ಇಂದು ಬೆಂಗಳೂರಿನ ಆರ್ ಟಿ ನಗರ ನಿವಾಸದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅವರು ಈ ಸೂಚನೆ ನೀಡಿದರು.

Leave a Reply

Your email address will not be published.