ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವವರ ಸಂಖ್ಯೆ ಗರಿಷ್ಟ ಮಟ್ಟದಲ್ಲಿ ಹೆಚ್ಚಳ: BMRCL

ಬೆಂಗಳೂರು

ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವವರ ಸಂಖ್ಯೆ ಗರಿಷ್ಠ ಮಟ್ಟದಲ್ಲಿ ಏರಿಕೆ ಆಗಿದೆ. ಇತ್ತೀಚೆಗೆ ಮೆಟ್ರೋದ ದೈನಂದಿನ ಪ್ರಯಾಣಿಕರ ಸಂಖ್ಯೆ 5 ಲಕ್ಷ ಗಡಿ ದಾಟಿರುವ ಬಗ್ಗೆ ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.

ನಗರದ 5 ಲಕ್ಷಕ್ಕೂ ಅಧಿಕ ಪ್ರಯಾಣಿಕರು ನಿತ್ಯ ನಮ್ಮ ಮೆಟ್ರೋದಲ್ಲಿ ಸಂಚರಿಸಿದ್ದಾರೆ. ಇದು ಕೊರೊನಾ ಲಾಕ್‌ಡೌನ್‌ಗಳ ನಂತರ ಮೆಟ್ರೋ ಬಳಕೆದಾರರ ಗರಿಷ್ಠ ಪ್ರಯಾಣಿಕರ ಸಂಖ್ಯೆ ಆಗಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ. ಬಿಎಂಆರ್‌ಸಿಎಲ್ 2020ರಂದು ನಮ್ಮ ಮೆಟ್ರೋ ಸೇವೆ ಪುನಾರಂಭಿಸಿತ್ತು. ಅಲ್ಲಿಂದ ಹಂತ ಹಂತವಾಗಿ ಪ್ರಯಾಣಿಕರ ಸಂಖ್ಯೆ ಏರಿಕೆ ಆಗಿತ್ತು. ಕಳೆದ ಜೂನ್ 4 ರಂದು ಒಂದೇ ದಿನ 5.7 ಲಕ್ಷ ಮಂದಿ ಪ್ರಯಾಣಿಸಿದ್ದಾರೆ.

ಜೂನ್ 6ರಂದು ಏಕದಿನ ಅತ್ಯಧಿಕ ಆದಾಯ ಅಂದರೆ ಒಂದೇ ದಿನ ಒಟ್ಟು ಸುಮಾರು 1.2 ಕೋಟಿ ರೂ. ಸಂಗ್ರಹವಾಗಿದೆ ಎಂದು ಬಿಎಂಆರ್‌ಸಿಎಲ್ ಸಾರ್ವಜನಿಕ ಸಂಪರ್ಕಾಧಿಕಾರಿ ಮುಖ್ಯಸ್ಥರ ಯಶವಂತ ಚವ್ಹಾಣ್ ಮಾಹಿತಿ ನೀಡಿದ್ದಾರೆ.

 

Leave a Reply

Your email address will not be published.