ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 1,615 ಮಂದಿಗೆ ಕೋವಿಡ್ ಸೋಂಕು..!

ಬೆಂಗಳೂರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 1,615 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 18,33,572 ಕ್ಕೆ ಏರಿಕೆ ಆಗಿದೆ. ನಿನ್ನೆ 1,077 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 18,08,574 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಕೋವಿಡ್ ಗೆ ಒಬ್ಬರು ಮೃತಪಟ್ಟಿದ್ದಾರೆ. ಇನ್ನು ಸಕ್ರಿಯ ಪ್ರಕರಣಗಳು 8,023 ಇದೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,974 ರಷ್ಟಿದೆ.

ಅದರಂತೆ ರಾಜ್ಯದಲ್ಲಿ ನಿನ್ನೆ ನಿಧಾನಗತಿಯಲ್ಲಿ ಕೋವಿಡ್ ಸೋಂಕು ಏರಿಕೆಯಾಗುತ್ತಿದೆ. ನಿನ್ನೆ 32,685 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 2,130 ಮಂದಿಗೆ ಸೋಂಕು ದೃಢಪಟ್ಟಿದೆ. ನಿನ್ನೆ 1,395 ಮಂದಿ ಡಿಸ್ಜಾರ್ಜ್ ಆಗಿದ್ದು, ಒಟ್ಟು 39,53, 776 ಮಂದಿ ಗುಣಮುಖರಾಗಿದ್ದಾರೆ. ನಿನ್ನೆ ಕೋವಿಡ್​ಗೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 9,866 ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published.