ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 1,225 ಮಂದಿಗೆ ಕೋವಿಡ್ ಸೋಂಕು..!

ಬೆಂಗಳೂರು

ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ 1,225 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 1,229 ಮಂದಿ ಗುಣಮುಖರಾಗಿದ್ದಾರೆ. ನಗರದಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 7,045 ಏರಿಕೆಯಾಗಿದೆ. ಅದರಂತೆ ರಾಜ್ಯದಲ್ಲಿ ನಿನ್ನೆ 27,725 ಮಂದಿಗೆ ಕೋವಿಡ್ ಪರೀಕ್ಷೆ ನಡೆದಿದೆ. ಈ ಪೈಕಿ 1,691 ಮಂದಿಗೆ ಸೋಂಕು ದೃಢಪಟ್ಟಿದೆ. 1,982 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 6 ಮಂದಿ ಮೃತಪಟ್ಟಿದ್ದಾರೆ. ಸದ್ಯ ಇರುವ ಸಕ್ರಿಯ ಪ್ರಕರಣಗಳ ಸಂಖ್ಯೆ 10,054. ಸೋಂಕಿತರ ಪ್ರಮಾಣ ಶೇ. 6.09 ರಷ್ಟಿದೆ. ವಿಮಾನ ನಿಲ್ದಾಣದಿಂದ 5,804 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published.