ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 871 ಜನರಿಗೆ ಕೊರೋನ ಸೋಂಕು..!

ಬೆಂಗಳೂರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 871 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. ನಗರದಲ್ಲಿ ಇಲ್ಲಿಯವರೆಗೆ ಒಟ್ಟು 18,05,970 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,969 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 17,82,925 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಂತೆ ರಾಜ್ಯದಲ್ಲಿ ನಿನ್ನೆ 975 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, ಸೋಂಕಿನಿಂದ ಒಬ್ಬರು ಮೃತಪಟ್ಟು, 668 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,71,459ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,077ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

 

 

Leave a Reply

Your email address will not be published.