
ಪಂಚಭೂತಗಳಲ್ಲಿ ಲೀನನಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು
ದಕ್ಷಿಣ ಕನ್ನಡ: ಬಿಜೆಪಿ ಯುವ ಮೋರ್ಚಾ ಮುಖಂಡನ ಪ್ರವೀಣ್ ನೆಟ್ಟಾರು ಪಂಚಭೂತಗಳಲ್ಲಿ ಲೀನರಾಗಿದ್ದು, ಕುಟುಂಬಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ಕಣ್ಣೀರ ವಿದಾಯ ಹೇಳಿದ್ದಾರೆ. ಸುಳ್ಯ ತಾಲೂಕಿನ ಬೆಳ್ಳಾರೆ ಬಳಿಯ ನೆಟ್ಟಾರು ಗ್ರಾಮದಲ್ಲಿರುವ ಪ್ರವೀಣ್ ನಿವಾಸದ ಸಮೀಪದಲ್ಲಿಯೇ ಅಂತ್ಯಕ್ರಿಯೆಯನ್ನು ನೆರವೇರಿಸಲಾಗಿದೆ. ಬಿಲ್ಲವ ಸಂಪ್ರದಾಯದಂತೆ ಪ್ರವೀಣ್ ನೆಟ್ಟಾರು ಅಂತ್ಯಕ್ರಿ ಯೆಯನ್ನು ನೆರವೇರಿಸಲಾಗಿದೆ. ಪ್ರವೀಣ್ ತಂದೆ ಚಿತೆಗೆ ಅಗ್ನಿಸ್ಪರ್ಶವನ್ನು ಮಾಡಿದರು.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು (32) ಅನ್ನು ಕೊಲೆ ಮಾಡಲಾಗಿತ್ತು. ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದರು. ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು.