ಈ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಂತರ, ಮೈಸೂರು, ಕೊಡಗಿನಲ್ಲಿ ಭಾರೀ ಮಳೆ ಸುರಿಯಲಿದೆ.

ಅಲ್ಲದೇ ಇಂದು ಮತ್ತು ನಾಳೆ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎರಡು ದಿನ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

Your email address will not be published.