ಭಾರತ vs ಇಂಗ್ಲೆಂಡ್ ಟೆಸ್ಟ್: ಅರ್ಧ ಶತಕ ಬಾರಿಸಿ ಹೊಸ ದಾಖಲೆ ಬರೆದ ರಿಷಭ್ ಪಂತ್

ಕ್ರೀಡೆ

ಬರ್ಮಿಂಗ್‌ಹ್ಯಾಮ್‌: ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲೂ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ಆಕರ್ಷಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಇಂಗ್ಲೆಂಡ್ ಎದುರಿನ ಮೊದಲ ಇನಿಂಗ್ಸ್‌ನಲ್ಲಿ ಸ್ಪೋಟಕ ಶತಕ ಬಾರಿಸಿದ್ದ ರಿಷಬ್ ಪಂತ್, ಇದೀಗ ಎರಡನೇ ಇನಿಂಗ್ಸ್‌ನಲ್ಲಿ ಕೂಡಾ ಅರ್ಧಶತಕ ಬಾರಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಎಜ್‌ಬಾಸ್ಟನ್‌ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 146 ರನ್ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದ ರಿಷಭ್ ಪಂತ್, ಎರಡನೇ ಇನಿಂಗ್ಸ್‌ನಲ್ಲಿ 57 ರನ್ ಬಾರಿಸುವ ಮೂಲಕ ವಿದೇಶಿ ನೆಲದಲ್ಲಿ ಟೆಸ್ಟ್‌ ಪಂದ್ಯವೊಂದರಲ್ಲಿ ಗರಿಷ್ಠ ರನ್‌ ಬಾರಿಸಿದ ಭಾರತದ ವಿಕೆಟ್‌ ಕೀಪರ್ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ. ಎಜ್‌ಬಾಸ್ಟನ್ ಟೆಸ್ಟ್‌ನ ಎರಡು ಇನಿಂಗ್ಸ್‌ಗಳಿಂದ ರಿಷಬ್ ಪಂತ್ ಒಟ್ಟು 203 ರನ್‌ ಬಾರಿಸಿದ್ದಾರೆ. ಅಲ್ಲದೇ ಇಂಗ್ಲೆಂಡ್‌ ನೆಲದಲ್ಲಿ ಟೆಸ್ಟ್‌ ಪಂದ್ಯವೊಂದರಲ್ಲಿ ಶತಕ ಹಾಗೂ ಅರ್ಧಶತಕ ಬಾರಿಸಿದ ಎರಡನೇ ವಿಕೆಟ್ ಕೀಪರ್‌ ಬ್ಯಾಟರ್ ಎನ್ನುವ ದಾಖಲೆ ಕೂಡಾ ರಿಷಭ್ ಪಂತ್ ಪಾಲಾಗಿದೆ.

Leave a Reply

Your email address will not be published.