ವಿಮೆ ಹಣ ಪಡೆಯಲು ಗಂಡ ಮಾಡಿದ ಖತರ್ನಾಕ್ ಪ್ಲ್ಯಾನ್..! ಮರಣೋತ್ತರ ವರದಿ ಭೇದಿಸಿತು ಪತ್ನಿಯ ಕೊಲೆ ರಹಸ್ಯ

ರಾಷ್ಟ್ರೀಯ

ನವದೆಹಲಿ: ಪತ್ನಿಯ ಹೆಸರಲ್ಲಿ ವಿಮೆ ಮಾಡಿಸಿದ್ದ ಗಂಡ, ಆ ಹಣವನ್ನು ಪಡೆಯುವ ಸಲುವಾಗಿ ಹೆಂಡತಿಯ ಕೊಲೆ ಮಾಡಲು ಪ್ಲ್ಯಾನ್‌ ಮಾಡಿ ಅದರಲ್ಲಿ ಯಶಸ್ವಿಯಾದ ಪ್ರಕರಣ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ನಡೆದಿದೆ. ಮೂರು ಜನ ಹಂತಕರನ್ನು ಹುಡುಕಿ ಅವರಿಗೆ ಪತ್ನಿಯನ್ನು ಕೊಲ್ಲಲು 5 ಲಕ್ಷ ರೂಪಾಯಿ ಸುಪಾರಿಯನ್ನೂ ನೀಡಿದ್ದ. ಮುಂಗಡ ಹಣವಾಗಿ 1 ಲಕ್ಷ ರೂಪಾಯಿ ನೀಡಿದ್ದ ಆತ, ಕೆಲಸ ಮುಗಿದ ಬಳಿಕ ಉಳಿದ ನಾಲ್ಕು ಲಕ್ಷ ರೂಪಾಯಿ ನೀಡುವುದಾಗಿ ಹೇಳಿದ್ದ.

ಹಂತಕರು ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದರೂ, ಅವರಿಗೆ ಸಿಗಬೇಕಾದ ನಾಲ್ಕು ಲಕ್ಷ ರೂಪಾಯಿ ಸಿಗಲಿಲ್ಲ. ಯಾಕೆಂದರೆ, ಪೊಲೀಸರು ಈ ಕೊಲೆಯ ಹಿಂದಿದ್ದ ಪ್ರಮುಖ ಸೂತ್ರಧಾರ ಆಕೆಯ ಪತಿ ಎನ್ನುವುದನ್ನು ಪತ್ತೆ ಹಚ್ಚಲು ಯಶಸ್ವಿಯಾಗಿದ್ದಾರೆ. ಜುಲೈ 26 ರಂದು ರಾತ್ರಿ 9 ಗಂಟೆ ಸುಮಾರಿಗೆ ನಿರ್ಜನವಾದ ಭೋಪಾಲ್ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿಯ ಮೇಲೆ ಅಪರಿಚಿತರು ದಾಳಿ ಮಾಡಿದ್ದಲ್ಲದೆ, ಪೂಜಾ ಎನ್ನುವ ಮಹಿಳೆಯನ್ನು ಗುಂಡು ಹಾರಿಸಿ ಕೊಂದಿದ್ದರು. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಈ ಕುರಿತಾದ ತನಿಖೆಯನ್ನು ನಡೆಸಿ, ಆಕೆಯೊಂದಿಗೆ ಬೈಕ್‌ನಲ್ಲಿದ್ದ ಗಂಡ ವಿಚಾರಣೆಯನ್ನೂ ಮಾಡಿದ್ದರು.

ಪೊಲೀಸರು ಮಹಿಳೆಯ ಶವವನ್ನು ವಶಪಡಿಸಿಕೊಂಡು, ಅದನ್ನು ತಕ್ಷಣವೇ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಘಟನೆಯ ಏಕೈಕ ಪ್ರತ್ಯಕ್ಷದರ್ಶಿ ಆಗಿದ್ದ ಆಕೆಯ ಪತಿ ಬದ್ರಿಪ್ರಸಾದ್ ಮೀನಾ ಅವರನ್ನು ವಿಚಾರಣೆ ಮಾಡಲು ಪ್ರಾರಂಭಿಸಿದರು. ಬದ್ರಿಪ್ರಸಾದ್ ಗುಜರಾತ್‌ ಸಮೀಪದ ಮನ್ಪುರಾ ಗ್ರಾಮದ ರೈತ. ಜುಲೈ 26 ರಂದು ಬೈಕ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ, ಮಾನ್‌ ಜೋಡ್‌ ಎನ್ನುವ ಸ್ಥಳದಲ್ಲಿ ಬೈಕ್‌ನಲ್ಲಿ ದೋಷ ಕಾಣಿಸಿಕೊಂಡಿತ್ತು ಎಂದು ಬದ್ರಿ ವಿಚಾರಣೆಯ ವೇಳೆ ಪೊಲೀಸರಿಗೆ ತಿಳಿಸಿದ್ದ. ಬಳಿಕ ಪತ್ನಿಯನ್ನು ರಸ್ತೆಯ ಬದಿಯಲ್ಲಿಯೇ ಸ್ವಲ್ಪ ಹೊತ್ತು ಕುಳಿತುಕೊಳ್ಳುವಂತೆ ಹೇಳಿ,

Leave a Reply

Your email address will not be published.