ಬಾಲಿವುಡ್ ನಟ ಸೋನು ಸೂದ್ ವಿರುದ್ಧ FIR ದಾಖಲು

ಚಲನಚಿತ್ರ

ಮುಂಬೈ: ಬಾಲಿವುಡ್ ನಟ ಸೋನು ಸೂದ್ ಅವರ ಸಹೋದರಿ ಮಾಲವಿಕಾ ಸೂದ್ ಅವರು ಪಂಜಾಬ್ ಚುನಾವಣಾ ಅಭ್ಯರ್ಥಿಯಾಗಿ ಮೊಗದಿಂದ ಸ್ಫರ್ಧೆ ಮಾಡಿದ್ದಾರೆ. ಮತದಾನ ನಡೆಯುವ ಸ್ಥಳಕ್ಕೆ ಸೋನು ಭೇಟಿ ನೀಡಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನುವ ಆರೋಪದ ಮೇಲೆ ಏಫ್‍ಐಆರ್ ದಾಖಲು ಮಾಡಲಾಗಿದೆ.

ಟ್ವೀಟ್ನಲ್ಲಿ ಏನಿದೆ?: ಮೊಗಾ ಕ್ಷೇತ್ರದಲ್ಲಿ ಇತರ ಪಕ್ಷಗಳ ಅಭ್ಯರ್ಥಿಗಳು ಮತಗಳನ್ನು ಖರೀದಿಸುತ್ತಿದ್ದಾರೆ. ಚುನಾವಣಾ ಆಯೋಗವು ಈ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆರೋಪಿಸಿ ಸೋನು ಸೂದ್ ಟ್ವೀಟ್ ಮಾಡಿ, ಮೊಗಾ ಪೊಲೀಸರ ಜೊತೆಗೆ ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಟ್ಯಾಗ್ ಮಾಡಿದ್ದರು.

ಶಿರೋಮಣಿ ಅಕಾಲಿದಳದ ಅಭ್ಯರ್ಥಿ ಬಜಿರ್ಂದರ್ ಸಿಂಗ್, ಅಲಿಯಾಸ್ ಮಖನ್ ಬ್ರಾರ್, ನನ್ನ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ. ಇದು ಕೇವಲ ಪಾರ್ಕಿಂಗ್ ಸಮಸ್ಯೆಯಾಗಿತ್ತು. ವಾಹನವನ್ನು ಸರಿಯಾಗಿ ನಿಲ್ಲಿಸಿರಲಿಲ್ಲ. ಬೇರೆ ಏನೂ ಇರಲಿಲ್ಲ ಎಂದು ಸೋನು ಸೂದ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Leave a Reply

Your email address will not be published.