Jagdeep Dhankhar.. ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಪ್ರಮಾಣವಚನ ಸ್ವೀಕಾರ

ರಾಷ್ಟ್ರೀಯ

ನವದೆಹಲಿ: ಭಾರತದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ರಾಷ್ಟ್ರಪತಿ ಭವನದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದ್ದಾರೆ. ದ್ರೌಪದಿ ಮುರ್ಮು ಕೂಡ ಕಳೆದ ತಿಂಗಳಷ್ಟೇ ಭಾರತದ 15ನೇ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು. ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಮುಕ್ತಾಯವಾಗಿತ್ತು.

 

ಹೀಗಾಗಿ, ಇಂದು ಜಗದೀಪ್ ಧನಕರ್ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಭಾರತ ದೇಶದ 14ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. ವಿರೋಧ ಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿದ್ದ ಮಾರ್ಗರೇಟ್ ಆಳ್ವ ಅವರನ್ನು ಜಗದೀಪ್ ಭಾರೀ ಅಂತರದಿಂದ ಸೋಲಿಸಿದರು. ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲರಾಗಿದ್ದ ಜಗದೀಪ್ ಧನಕರ್ ರಾಜ್ಯಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

Leave a Reply

Your email address will not be published.