
ಶಿವಮೊಗ್ಗ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು: ಶಿವಮೊಗ್ಗ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತನ ಹತ್ಯೆಯಿಂದಾಗಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಹೀಗಿದ್ದೂ ಹರ್ಷ ಪಾರ್ಥೀವ ಶರೀರದ ಮೆರವಣಿಗೆ ಮಾಡಿದ್ದಾರೆ. ಹಿಂದೂ ಸಂಘಟನೆಗಳೇ ಬೀದಿಗಿಳಿದು ಕಲ್ಲು ತೂರಾಟ ನಡೆಸಿದ್ದಾರೆ. ನಿನ್ನೆ ಸಚಿವ ಈಶ್ವರಪ್ಪನವರೇ ಶಾಂತಿ ಕದಡುವಂತ ಕೆಲಸ ಮಾಡಿದ್ದಾರೆ ಎಂದು ಹೇಳಿದರು. ಇನ್ನೂ ಹರ್ಷ ಕೊಲೆಯ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಬೇಕು. ಪಿಎಫ್ಐ, ಎಸ್ ಡಿ ಪಿಐ ನಿಷೇಧದ ಬಗ್ಗೆ ನಮ್ಮ ತಕರಾರು ಇಲ್ಲ. ಬಿಜೆಪಿ ಸರ್ಕಾರವೇ ಇದೆ. ಈಗ ನಿಷೇಧ ಮಾಡಲಿ. ಹರ್ಷ ಮೆರವಣಿಗೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಪಾಲಿಸಿಲ್ಲ. ಮೆರವಣಿಗೆಗೆ ಅವಕಾಶ ಕೊಡಬಾರದಾಗಿತ್ತು. ಪೊಲೀಸರು ನಿಷೇಧಾಜ್ಞೆ ನಡುವೆಯೂ ಅವಕಾಶ ಕೊಟ್ಟಿದ್ದು ಹೇಗೆ.? ಈ ಬಗ್ಗೆ ನ್ಯಾಯಾಂಗ ತನಿಖೆ ಯಾಗಬೇಕು ಎಂದು ಸಿದ್ದು ಒತ್ತಾಯಿಸಿದರು.