Karnataka Rain.. ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು

ಬೆಂಗಳೂರು :ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು,  ಕೋಲಾರ, ಮೈಸೂರು, ಮಂಡ್ಯ ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ.

ಬೆಳಗಾವಿ, ಬೀದರ್, ಕಲಬುರಗಿ, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ನೀಡಲಾಗಿದೆ. ಕರ್ನಾಟಕದಲ್ಲಿ ಇಂದಿನಿಂದ 2 ದಿನ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published.