Khatu Shyam Temple.. ಖತು ಶ್ಯಾಮಜಿ ದೇವಸ್ಥಾನದಲ್ಲಿ ಕಾಲ್ತುಳಿತ: ಮೂವರು ಭಕ್ತರ ಸಾವು

ರಾಷ್ಟ್ರೀಯ

ಜೈಪುರ: ರಾಜಸ್ಥಾನದ ಸಿಕಾರ್‌ನಲ್ಲಿರುವ ಖತು ಶ್ಯಾಮ್‌ ದೇವಸ್ಥಾನದಲ್ಲಿ  ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ಜೈಪುರದ ಆಸ್ಪತ್ರೆಗೆ ರವಾನಿಸಲಾಗಿದೆ. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ ಎನ್ನಲಾಗಿದೆ. ಇಂದು ಭಗವಾನ್ ಕೃಷ್ಣನ ಅವತಾರವೆಂದು ನಂಬಲಾದ ಖತು ಶ್ಯಾಮ್ ಜಿಯ ದರ್ಶನಕ್ಕೆ ಬಹಳ ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ.

ಹೀಗಾಗಿ, ಮುಂಜಾನೆಯಿಂದಲೇ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಪೊಲೀಸರ ಪ್ರಕಾರ, ದೇವಾಲಯದ ಹೊರಗೆ ದೊಡ್ಡ ಜನಸಮೂಹ ಜಮಾಯಿಸಿ, ಗೇಟ್ ತೆರೆಯುವುದನ್ನೇ ಕಾಯುತ್ತಿದ್ದರು. ಗೇಟ್‌ಗಳು ತೆರೆಯುತ್ತಿದ್ದಂತೆ ಜನರು ಒಳಗೆ ಬರಲು ಒಬ್ಬರ ಮೇಲೆ ಒಬ್ಬರು ಬಿದ್ದು ಮುನ್ನುಗ್ಗಲು ಪ್ರಯತ್ನಿಸಿದಾಗ ಮಹಿಳೆಯೊಬ್ಬರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಇದರಿಂದಾಗಿ ಅವರ ಹಿಂದೆ ಇದ್ದವರು ಸಹ ಕೆಳಗೆ ಬಿದ್ದಿದ್ದಾರೆ. ಈ ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಗಾಯಗೊಂಡಿದ್ದಾರೆ.

Leave a Reply

Your email address will not be published.