
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ..!
ಬೆಂಗಳೂರು: ನಗರದ ಶಾಲೆಗಳಿಗೆ ಬಾಂಬ್ ಬೆದರಿಕೆ ಮುಂದುವರೆದಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಇದೀಗ ಮತ್ತೆ ಬೆಂಗಳೂರಿನ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಆರ್.ಆರ್.ನಗರ ಠಾಣಾ ವ್ಯಾಪ್ತಿಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ದುಷ್ಕರ್ಮಿಗಳು ಭಾನುವಾರ ರಾತ್ರಿಯೇ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ಗೆ ಬಾಂಬ್ ಬಾಂಬ್ ಇಡುವುದಾಗಿ ಇ-ಮೇಲ್ ಮುಖಾಂತರ ಬೆದರಿಕೆ ಹಾಕಿದ್ದಾರೆ. ಪ್ರಕರಣ ಸಂಬಂಧ ಆರ್.ಆರ್.ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.