
KRS ಗೆ ಬಾಗೀನ ಅರ್ಪಣೆ ಕಾರ್ಯಕ್ರಮ ; ರಾಜವಂಶಸ್ಥ ಯದುವೀರ್ ಆಹ್ವಾನಿಸಿ
ಮಂಡ :- ಮಂಡ್ಯ ಜಿಲ್ಲೆಯ ಜೀವನಾಡಿ ಕೆಆರ್ಎಸ್ ಜಲಾಶಯಕ್ಕೆ ಸರ್ಕಾರದಿಂದ ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಆಹ್ವಾನಿಸಬೇಕೆಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಲೋಕೇಶ್ ವಿ.ಪಿಯಾ ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರಿಗೆ ಮನವಿ ಸಲ್ಲಿಸಿದ್ದಾರೆ.ಕೊಡಗು ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ,
ಉತ್ತಮ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾದ ಕೃಷ್ಣರಾಜಸಾಗರ ಜಲಾಶಯ ಬೇಗನೆ ಮೈದುಂಬಿದೆ. ಕೆ.ಆರ್.ಎಸ್ ಜಲಾಶಯ ನಿರ್ಮಾಣಕ್ಕೆ ಮೈಸೂರು ಮಹಾರಾಜರು ನೀಡಿರುವ ಕೊಡುಗೆ ಅಪಾರ. ಜಿಲ್ಲೆಯ ರೈತರು, ಜನರ ಅನುಕೂಲಕ್ಕಾಗಿ ಅವರ ತ್ಯಾಗ ಬಹು ದೊಡ್ಡದು. ಇದನ್ನು ಸ್ಮರಿಸುವುದಕ್ಕಾಗಿ, ಸಂಪ್ರದಾಯದಂತೆ ಬಾಗಿನ ಸಮರ್ಪಿಸುವ ವೇಳೆ ಮುಖ್ಯಮಂತ್ರಿ ಸೇರಿದಂತೆ ಗಣ್ಯರೊಂದಿಗೆ ಯದುವೀರ್ ಅವರನ್ನೂ ಆಹ್ವಾನಿಸಬೇಕು’ ಎಂದು ಒತ್ತಾಯಿಸಿದ್ದಾರೆ.