ವರದಿ: ಚಂದ್ರು ಶ್ರೀರಾಮುಡು
ಕುಂದಾನಗರಿ ಬೆಳಗಾವಿಯಲ್ಲಿ ಉಪ ಚುನಾವಣೆ ಕಾವು ರಂಗೇರುತ್ತಿದೆ. ಇಂದು ಬಿಜೆಪಿ ಘಟಾನುಘಟಿಗಳು ಅಭ್ಯರ್ಥಿ ಪರ ಅಬ್ಬರ ಪ್ರಚಾರ ನಡೆಸಿದರು. ನಿನ್ನೆಯಷ್ಟೆ ಸಿಎಂ ಯಡಿಯೂರಪ್ಪ ಎರಡು ದಿನಗಳ ಕಾಲ ಪ್ರಚಾರ ಮಾಡಿ ಮತ ಬೇಟೆ ನಡೆಸಿದರೆ ಇತ್ತ ಇಂದು ಕಾಂಗ್ರೆಸ್ ಡಿಕೆಶಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ಮತ ಬೇಟೆ ನಡೆಸಿದರು.
ಬೆಳಗಾವಿ ಲೋಕಸಭಾ ಉಪಚುನಾವಣೆ ಹಣಾಹಣಿ ಜೋರಾಗಿದೆ. ದಿ. ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದಾಗಿ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು ಇದೇ ಏಪ್ರಿಲ್ 17ಕ್ಕೆ ಚುನಾವಣೆ ನಡೆಯಲಿದೆ. ಹೀಗಾಗಿ ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಘಟಾನುಘಟಿ ನಾಯಕರು ಪ್ರಚಾರ ನಡೆಸಿ ಮತ ಬೇಟೆ ನಡೆಸಿದರು. ಇಂದು ಬಿಜೆಪಿ ಅಭ್ಯರ್ಥಿ ಪರವಾಗಿ ಸಿಎಂ ಯಡಿಯೂರಪ್ಪ ನಿನ್ನೆಯಷ್ಟೆ ಅಬ್ಬರದ ಪ್ರಚಾರ ನಡೆಸಿ ಮತ ಬೇಟೆ ನಡೆಸಿ ವಾಪಸ್ ಬೆಂಗಳೂರಿಗೆ ಆಗಮಿಸಿದ್ದಾರೆ. ಇನ್ನು ಇಂದು ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರವಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಗೋಕಾಕ , ಅರಭಾವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ಅರಭಾವಿ, ಕಲ್ಲೊಳಿ, ತಕಾನಟ್ಟಿ, ಮೂಡಲಗಿ, ಯಾದವಾಡ, ಕುಲಗೋಡ ಕೌಜಲಗಿ ಮೆಳವಂಕಿ ಗ್ರಾಮದಲ್ಲಿ ಪ್ರಚಾರ ನಡೆಸಿ ಮತ ಬೇಟೆ ನಡೆಸಿದರು.
ಇನ್ನು ಇತ್ತ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸೇರಿದಂತೆ ಎಂಟು ವಿಧಾನ ಸಭಾ ಕ್ಷೇತ್ರದಲ್ಲೂ ಬಿಜೆಪಿ ಘಟಾನುಘಟಿಗಳು ಅಖಾಡಕ್ಕೆ ಇಳಿದಿದ್ದು ಮತ ಬೇಟೆ ನಡೆಸಿದೆ. ಇತ್ತ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರವಾಗಿ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಇನ್ನು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅಲೆ ಎದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ ಪರವಾಗಿ ಉತ್ತಮ ವಾತಾವರಣ ಇದೆ. ಕಾಂಗ್ರೆಸ್ ಮೂರು ಕ್ಷೇತ್ರದಲ್ಲಿ ಗೆಲವು ಸಾಧಿಸುತ್ತೆ ಅಂತಾ ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದರು.
ಒಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯನ್ನ ಎರಡು ಪಕ್ಷಗಳು ಪ್ರತಿಷ್ಠೆಯಾಗಿ ತೆಗೆದುಕೊಂಡು ಅಭ್ಯರ್ಥಿಗಳ ಗೆಲುವಿಗಾಗಿ ಶತಾಯ ಗತಾಯ ಪ್ರಯತ್ನ ನಡೆಸಿದ್ದಾರೆ. ಕೊನೆಯಲ್ಲಿ ಮತದಾರ ಪ್ರಭು ಯಾರಿಗೆ ಜೈ ಅಂತಾರೆ ಕಾದುನೋಡಬೇಕು.