ಹಿಜಾಬ್ ಸಂಘರ್ಷ: ಪ್ಯಾರಾ ಮೆಡಿಕಲ್ ಕಾಲೇಜಿಗೆ ಮುಂದಿನ ಆದೇಶದವರೆಗೆ ರಜೆ ಘೋಷಣೆ

ಜಿಲ್ಲೆ

ಬೆಳಗಾವಿ: ಬೆಳಗಾವಿಯ  ವಿಜಯ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹಿಜಾಬ್ ಸಂಘರ್ಷ ಮುಂದುವರಿದಿದೆ. ವಿದ್ಯಾರ್ಥಿನಿಯರಿಬ್ಬರು  ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಾರೆ. ಹಿಜಾಬ್ ಧರಿಸಿಯೇ ತರಗತಿಯಲ್ಲೇ ಕುಳಿತಿದ್ದಾರೆ. 2 ದಿನಗಳಿಂದ ಹಿಜಾಬ್‌ಗೆ ಪಟ್ಟು ಹಿಡಿದಿರುವ ವಿದ್ಯಾರ್ಥಿನಿಯರು ಹೈಕೋರ್ಟ್ ಮಧ್ಯಂತರ ಆದೇಶ ಅನ್ವಯಿಸಲ್ಲ ಎಂದು ಹೇಳುತ್ತಿದ್ದಾರೆ. ಇನ್ನೂ ವಿಜಯ್ ಪ್ಯಾರಾ ಮೆಡಿಕಲ್ ಕಾಲೇಜಿಗೆ ಮುಂದಿನ ಆದೇಶದವರೆಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿಯಿಂದ ಆರಂಭವಾದ ಹಿಜಾಬ್ ವಿವಾದ ಇಡೀ ದೇಶವನ್ನೇ ವ್ಯಾಪಿಸಿದೆ. ಶಾಲೆ- ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಬಗ್ಗೆ ಹೈಕೊರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ತೀರ್ಪು ಬರುವವರೆಗೆ ವಿದ್ಯಾ ಮಂದಿರಕ್ಕೆ ಯಾವುದೇ ಧಾರ್ಮಿಕ ವಸ್ತ್ರಗಳನ್ನ ಧರಿಸುವಂತಿಲ್ಲ ಅಂತ ಕೋರ್ಟ್ ತಿಳಿಸಿದೆ.

ಹೀಗಿದ್ದೂ, ರಾಜ್ಯದ ಹಲವೆಡೆ ಇದು ನಮ್ಮ ಧಾರ್ಮಿಕ ಹಕ್ಕು. ನಾವು ಹಿಜಾಬ್ ಧರಿಸಿಯೇ ಪಾಠ ಕೇಳುತ್ತೇವೆ ಅಂತ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಹಿಜಾಬ್ ಧರಿಸಲು ಅನುಮತಿಗೆ ಆಗ್ರಹಿಸಿ ಪ್ರತಿಭಟನೆಯೂ ನಡೆಸಿದ್ದಾರೆ. ಕೆಲ ವಿದ್ಯಾರ್ಥಿನಿಯರು ನಮಗೆ ಧರ್ಮಕ್ಕಿಂತ ಶಿಕ್ಷಣ ಮುಖ್ಯ. ಹೀಗಾಗಿ ಹಿಜಾಬ್ ತೆಗೆದು ಪಾಠ ಕೇಳುತ್ತೇವೆ ಎಂದು ಹೇಳುತ್ತಿದ್ದಾರೆ. ಇನ್ನು ಕೆಲವರು ಹಿಜಾಬ್ ನಮ್ಮ ಹಕ್ಕು. ಅದನ್ನು ತೆಗೆಯಲು ಯಾವುದೇ ಕಾರಣಕ್ಕೂ ಆಗಲ್ಲ ಅಂತ ಕಾಲೇಜುಗಳ ಮುಂದೆ ಧರಣಿ ನಡೆಸುತ್ತಿದ್ದಾರೆ. ಸದ್ಯ ಈ ಬಗ್ಗೆ ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಯಲಿದೆ.

 

Leave a Reply

Your email address will not be published.