ನಾವು ಕಾಂಗ್ರೆಸ್ ನವರಿಂದ ಕೋಮು ಸಂಘರ್ಷದ ಪಾಠ ಕಲಿಯಬೇಕಾಗಿಲ್ಲ: ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು

ಬೆಂಗಳೂರು: ಕೋಮು ಸಂಘರ್ಷದ ಪಾಠ ಮಾಡಿದ ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ಸಂಬಂ ಧ ಆರ್ ಟಿ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಂದ ಕೋಮು ಸಂಘರ್ಷದ ಪಾಠ ಕಲಿಯಬೇಕಾಗಿಲ್ಲ ಎಲ್ಲವೂ ಜನರಿ ಗೆ ತಿಳಿದಿದೆ. ಕಾಂಗ್ರೆಸ್‍ನವರು ಅಧಿಕಾರದಲ್ಲಿದ್ದಾಗ ಇದನ್ನೇ ಮಾಡಿರುವ ಅನುಭವದಲ್ಲಿ ಹೇಳುತ್ತಿದ್ದಾರೆ. ನಮಗೆ ಅವರಿಂದ ನೀತಿ ಪಾಠ ಬೇಕಾಗಿಲ್ಲ ಎಂದು ಟಾಂಗ್ ಕೊಟ್ಟರು. ಇನ್ನೂ ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕತ ಹರ್ಷ ಕಗ್ಗೊಲೆ ನಂತರ ಪೊಲೀಸರು ಆರೋಪಿ ಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಶಾಂತಿಯುತವಾಗಿ ಇದೆ ಎಂದು ಹೇಳಿದರು. ಹಿರಿಯ ಪೊಲೀಸ್ ಅಧಿಕಾರಿಗಳು, ವಿವಿಧ ತುಕಡಿಗಳು ಈಗಲೂ ಸ್ಥಳದಲ್ಲಿಯೇ ಬೀಡುಬಿಟ್ಟಿವೆ. ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್ ಹಾಕಲಾಗಿದೆ. ಸದ್ಯಕ್ಕೆ ದಿನ ಕಳೆದಂತೆ ಪರಿಸ್ಥಿತಿ ಸುಧಾರಿಸುತ್ತಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಮರುಕಳಿಸಿಲ್ಲ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published.