ಸ್ವಾತಂತ್ರ್ಯದ ನಡಿಗೆ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿಗೆ ಆಹ್ವಾನ ನೀಡಿದ KPCC ಅಧ್ಯಕ್ಷ

ಬೆಂಗಳೂರು

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಹ್ವಾನಿಸಿದ್ದಾರೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ನಡಿಗೆ ಎಂಬ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದಾರೆ.

ಸುಮಾರು ಒಂದು ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುವಂತೆ ಖುದ್ದು ಡಿ.ಕೆ.ಶಿವಕುಮಾರ್ ಅವರು ಪ್ರಿಯಾಂಕಾ ಗಾಂಧಿಯವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ. ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ‌ ಉದ್ಘಾಟನೆಗೆ ಪ್ರಿಯಾಂಕಾ ಗಾಂಧಿ ಆಗಮಿಸುವ ವಿಚಾರ ನಾಳೆ ಅಧಿಕೃತಗೊಳ್ಳಲಿದೆ.

Leave a Reply

Your email address will not be published.