ಮದ್ಯದಂಗಡಿಗಳಲ್ಲಿ ಮದ್ಯದ ಸ್ಟಾಕ್ ಖಾಲಿ: ಸರ್ಕಾರದ ವಿರುದ್ಧ ಬಾರ್ ಮಾಲೀಕರ ಆಕ್ರೋಶ

ಬೆಂಗಳೂರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸರ್ವರ್ ತೊಂದರೆಯಿಂದಾಗಿ ಮದ್ಯದ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮದ್ಯದ ಅಂಗಡಿಗಳಲ್ಲಿ ಇದ್ದ ಸ್ಟಾಕ್ ಖಾಲಿಯಾಗಿದೆ. ಈ ಹಿನ್ನೆಲೆಯಲ್ಲಿ ಮದ್ಯದಂಗಡಿಗಳ ಮಾಲೀಕರು KSBCL ಕಚೇರಿಯಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ. ಶಾಂತಿನಗರದ ಬಳಿ ಇರುವ KSBCL ಕಚೇರಿಯಲ್ಲಿ ಅಧಿಕಾರಿಗಳು ಮತ್ತು ಮದ್ಯ ಮಾರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.

ಸುಮಾರು 300 ಕ್ಕೂ ಹೆಚ್ಚು ಮದ್ಯ ಮಾರಾಟಗಾರರು ಕಚೇರಿಗೆ ಆಗಮಿಸಿ ಸರ್ವರ್ ಸಮಸ್ಯೆಯನ್ನು ಶೀಘ್ರ ಬಗೆಹರಿಸಿ ಮದ್ಯ ಸರಬರಾಜು ಮಾಡುವಂತೆ ಆಗ್ರಹಿಸಿದರು. ರಾಜ್ಯ ಸರ್ಕಾರ ಮದ್ಯ ಪೂರೈಕೆಯಲ್ಲಿನ ಸಮಸ್ಯೆಯನ್ನು 24 ಗಂಟೆಯೊಳಗೆ ಬಗೆಹರಿಸದಿದ್ದರೆ ಶನಿವಾರದಿಂದ ಮದ್ಯ ಮಾರಾಟವನ್ನು ಬಂದ್ ಮಾಡಲಾಗುವುದು. ಮದ್ಯ ಖರೀದಿ ಪ್ರಕ್ರಿಯೆಯಲ್ಲಿ ಸಾಕಷ್ಟು ಗೊಂದಲಗಳಿವೆ ಇದರಿಂದ ಬಾರ್ ಮಾಲೀಕರು ಸಂಕಷ್ಟ ಎದುರಿಸುವಂತಾಗಿದೆ ಎಂದು ಮದ್ಯ ಮಾರಾಟಗಾರರ ಒಕ್ಕೂಟದ ಅಧ್ಯಕ್ಷ ಎಸ್. ಗುರುಸ್ವಾಮಿ ತಿಳಿಸಿದ್ದಾರೆ.

Leave a Reply

Your email address will not be published.