Home District ಮಲೆಮಹದೇಶ್ವರ ಬೆಟ್ಟದಲ್ಲಿ ಅಧಿಕಾರಿಗಳು ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ; ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಮಲೆಮಹದೇಶ್ವರ ಬೆಟ್ಟದಲ್ಲಿ ಅಧಿಕಾರಿಗಳು ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ; ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

515
0

ಚಾಮರಾಜನಗರ: ಪವಾಡ ಪುರುಷ ಮಲೆ ಮಹದೇಶ್ವರ ಬೆಟ್ಟದಲ್ಲಿನ ಬೀದಿಬದಿ ವ್ಯಾಪಾರಿಗಳು ಮತ್ತು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಅಧಿಕಾರಿಗಳು ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಭಾನುವಾರ ನಡೆದಿದೆ.

ಮಹದೇಶ್ವರ ಬೆಟ್ಟದಲ್ಲಿ ಬೀದಿ ಬದಿ ವ್ಯಾಪಾರವನ್ನು ನಿಲುಗಡೆ ಮುಂದಾಗಿರುವ ಪ್ರಾಧಿಕಾರವು, ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದಲ್ಲಿ ಖಾಲಿ ಇರುವ ಅಂಗಡಿಗಳನ್ನು ಹರಾಜಿನಲ್ಲಿ ಪಡೆದು ವ್ಯಾಪಾರ ಮಾಡುವಂತೆ ಸೂಚಿಸಿದ್ದರೂ ಸಹ, ಬೀದಿ ಬದಿ ವ್ಯಾಪಾರಿಗಳು ಇದಕ್ಕೆ ಒಪ್ಪದೆ ಬೀದಿ ಬದಿಯಲ್ಲೇ ವ್ಯಾಪಾರ ಮಾಡಲು ಮುಂದಾದಾಗ ಅಭಿವೃದ್ದಿ ಪ್ರಾಧಿಕಾರ ಅಧಿಕಾರಿಗಳು ಸಿಬ್ಬಂದಿಗಳ ನಡುವೆ ವಾಗ್ವಾದ ನಡೆದ ಘಟನೆ ನಡೆದಿದೆ.

ಭಾನುವಾರ ಬೆಳಗ್ಗೆ ದೇವಾಲಯದ ಅಭಿವೃದ್ದಿ ಪ್ರಾಧಿಕಾರ ಸಿಬ್ಬಂದಿಗಳು ಬೀದಿ ಬದಿ ವ್ಯಾಪಾರ ತೆರವುಗೊಳಿಸಲು ಮುಂದಾಗುತ್ತಿದ್ದಂತೆ ಮಹಿಳಾ ವ್ಯಾಪಾರಿಗಳು ಆಕ್ರೋಶಭರಿತವಾಗಿ ಮಾತಿನ ಚಕಮಕಿ ಇಳಿದರು.

ಈ ಬಗ್ಗೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೇವಾಲಯ ಅಭಿವೃದ್ದಿ ಪ್ರಾಧಿಕಾರ ದೂರು ನೀಡಿದ್ದು, ಪ್ರಸ್ತುತ ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆ ಕೊಡುವ ಉದ್ದೇಶವಿಲ್ಲ, ಅವರೆಲ್ಲರೂ ವಾರ್ಷಿಕ ಬಾಡಿಗೆ ಆಧಾರದ ಮೇಲೆ ಖಾಲಿ ಇರುವ ಅಂಗಡಿಗಳಲ್ಲಿ ವ್ಯಾಪಾರ ಮಾಡಲಿ ಅವರಿಗೆ ಬೇಕಾಗುವ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದು ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ತಿಳಿಸಿದ್ದಾರೆ.

Previous articleಕನಕ ಗುರುಪೀಠದಲ್ಲಿ ವಿವಿಧ ಕಟ್ಟಡಗಳ ಉದ್ಘಾಟನೆ; ಸಚಿವ ಈಶ್ವರಪ್ಪ ಭಾಗಿ
Next articleಸಿಡಿ ಲೇಡಿ ವಿಷಯದಲ್ಲಿ ನನ್ನ ಯಾವುದೇ ಪಾತ್ರ ಇಲ್ಲ; ಡಿ ಸುಧಾಕರ್ ಸ್ಪಷ್ಟನೆ 

LEAVE A REPLY

Please enter your comment!
Please enter your name here