Child Marriage..ವಿವಾಹ ವಯಸ್ಸು 21: ಬಾಲ್ಯ ವಿವಾಹ ಹೆಚ್ಚಾಗುವ ಆತಂಕ

ಬೆಂಗಳೂರು

ಬೆಂಗಳೂರು: ಹೆಣ್ಣು ಮಕ್ಕಳ ವಿವಾಹ  ವಯಸ್ಸು ಹೆಚ್ಚಳ ಮಾಡುವ ಬಗ್ಗೆ ಕೇಂದ್ರ ಸರ್ಕಾರದ ಕಳೆದ ಡಿಸೆಂಬರ್‌ನಲ್ಲಿ ಇಟ್ಟ ಪ್ರಸ್ತಾಪಕ್ಕೆ ರಾಜ್ಯದ ಹಲವು ಜಿಲ್ಲೆಯಲ್ಲಿ ಸಾಕಷ್ಟು ಪರ, ವಿರೋಧ ಚರ್ಚೆಯಾಗಿತ್ತು. ಇದರ ಬೆನ್ನಲೇ ಕೇಂದ್ರದ ಈ ನಿರ್ಧಾರದಿಂದ ಜಿಲ್ಲಾದ್ಯಂತ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುವ ಆತಂಕ ಅಧಿಕಾರಿಗಳನ್ನು ಚಿಂತೆಗೀಡು ಮಾಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗಡಿಭಾಗದಲ್ಲಿ ಪ್ರಕರಣಗಳು ಹೆಚ್ಚು:
ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಇದುವರೆಗೂ ದಾಖಲಾಗಿರುವ ಬಾಲ್ಯ ವಿವಾಹ ಪ್ರಕರಣಗ ಳಲ್ಲಿ ಅರ್ಧದಷ್ಟು ಜಿಲ್ಲೆಯ ಆಂಧ್ರದ ಗಡಿಗೆ ಹೊಂದಿಕೊಂಡಿರುವ ಬಾಗೇಪಲ್ಲಿ, ಗೌರಿಬಿದನೂರು ತಾಲೂಕುಗಳಲ್ಲಿ ದಾಖಲಾಗಿವೆ. ಆದರಲ್ಲೂ ಕೊರೋನಾ ಸಂದರ್ಭದಲ್ಲಿ ಸಾಕಷ್ಟು ಬಾಲ್ಯ ವಿವಾಹ ಪ್ರಕರಣಗಳನ್ನು ಅಧಿಕಾರಿಗಳು ಸಮಯೋಜಿತ ದಾಳಿಯಿಂದ ತಡೆಯ ಲಾಗಿದೆ. ಕೆಲ ಪೋಷಕರು ಕದ್ದು ಮುಚ್ಚಿ ಪೋಷಕರು ಅಪ್ರಾಪ್ತ ವಯಸ್ಸಿಗೆ ಮದುವೆ ಮಾಡಿಸಿದ್ದಾರೆ.

ಆದರೆ ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ವಿವಾಹ 18 ರಿಂದ 21ಕ್ಕೆ ಏರಿಸುವುದು ಒಳ್ಳೆಯ ಉದ್ದೇಶವಾದರೂ ಕದ್ದುಮುಚ್ಚಿ ನಡೆಯುವ ಬಾಲ್ಯ ವಿವಾಹಗಳನ್ನು ತಡೆಗಟ್ಟುವುದು ಹೇಗೆ ಎನ್ನುವ ಚಿಂತೆ ಅಧಿಕಾರಿಗಳನ್ನು ಕಾಡುತ್ತಿದೆ. ಜಿಲ್ಲೆಯಲ್ಲಿ ಬರೋಬ್ಬರಿ 6 ವರ್ಷದಲ್ಲಿ 660 ಬಾಲ್ಯ ವಿವಾಹ ಪ್ರಕರಣಗಳು ನಡೆದಿದ್ದು ಆ ಪೈಕಿ 57 ಬಾಲ್ಯ ವಿವಾಹಗಳು ನಡೆದು  ಆ ಪೈಕಿ 603 ವಿವಾಹಗಳನ್ನು ಅಧಿಕಾರಿಗಳು, ಪೊಲೀಸರು  ಕಾರ್ಯಾಚರಣೆ ನಡೆಸಿ ತಡೆಯಲಾಗಿದೆ.

Leave a Reply

Your email address will not be published.