ವಿವಾಹಿತ ಹೆಣ್ಣು ಮಕ್ಕಳು ಸಹ ಹೆತ್ತವರ ವಿಮೆ ಹಕ್ಕಿಗೆ ಅರ್ಹರು: ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಬೆಂಗಳೂರು

ಬೆಂಗಳೂರು: ವಿವಾಹಿತ ಹೆಣ್ಣು ಮಕ್ಕಳು ಅಪಘಾತದಲ್ಲಿ ತಮ್ಮ ಹೆತ್ತವರನ್ನು ಕಳೆದುಕೊಂಡರೆ ವಿಮೆ ಪರಿಹಾರ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇಂತಹ ಪ್ರಕರಣಗಳಲ್ಲಿ ವಿವಾಹಿತ ಪುತ್ರರೂ ಸಹ ಪರಿಹಾರ ಪಡೆಯಲು ಅರ್ಹರು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಈ ನ್ಯಾಯಾಲಯವು ಅವರು ವಿವಾಹಿತ ಪುತ್ರರು ಅಥವಾ ವಿವಾಹಿತ ಹೆಣ್ಣುಮಕ್ಕಳು ಎಂಬ ಯಾವುದೇ ತಾರತಮ್ಯ ಮಾಡಲು ಸಾಧ್ಯವಿಲ್ಲ ಮತ್ತು ಆದ್ದರಿಂದ, ಮೃತರ ವಿವಾಹಿತ ಹೆಣ್ಣುಮಕ್ಕಳು ಪರಿಹಾರಕ್ಕೆ ಅರ್ಹರಲ್ಲ ಎಂಬ ವಾದವನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಿವಾಹಿತ ಹೆಣ್ಣು ಮಕ್ಕಳಿಗೆ ಪರಿಹಾರ ನೀಡುವುದನ್ನು ಪ್ರಶ್ನಿಸಿ ವಿಮಾ ಕಂಪನಿ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್‌.ಪಿ ಸಂದೇಶ್ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.

Leave a Reply

Your email address will not be published.