ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಡೆದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ಬೆಂಗಳೂರು

ವಿಧಾನಸೌಧದ ಪಶ್ಚಿಮದ್ವಾರದ ಬಳಿ ಭಾರತದ ಮಾಜಿ ಉಪ ಪ್ರಧಾನಿ ದಿವಂಗತ ಡಾ. ಬಾಬು ಜಗಜೀವನ್‍ರಾಂ ಅವರ 36ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಜಗಜೀವನ್‍ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಿಎಂ ಬೊಮ್ಮಾಯಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಹಸಿರುಕ್ರಾಂತಿಯ ಹರಿಕಾರ ಬಾಬೂಜಿ ಅವರು ದೇಶಕ್ಕಾಗಿ ನೀಡಿದ ಕೊಡುಗೆಗಳು ಅಪಾರ. ಇಂತಹ ಮಹಾನ್ ನಾಯಕರ ಆದರ್ಶ, ಚಿಂತನೆಗಳು ಇಂದಿಗೂ ದಾರಿದೀಪವಾಗಿವೆ. ಶೋಷಿತರ ದಮನಿತರ ಪರವಾಗಿ ಹೋರಾಟ ನಡೆಸಿದ ಅವರು ಮತ್ತೊಬ್ಬರಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಸಿಎಂ ಬೊಮ್ಮಾಯಿ ಅವರು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಮಾಜಿ ಸಚಿವ ಎಚ್ ಆಂಜನೇಯ ಮತ್ತು ಇತರರು ಉಪಸ್ಥಿತರಿದ್ದರು.

 

Leave a Reply

Your email address will not be published.