ರಾಗಿ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಗಮನ ಹರಿಸಬೇಕು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ

ಬೆಂಗಳೂರು

ಬೆಂಗಳೂರು: ರಾಗಿ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಗಮನ ಹರಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಸಚಿವರಿಗೆ ಮನವಿ ಸಲ್ಲಿಸು ತ್ತೇನೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿಕೆ ಕೊಟ್ಟಿದ್ದಾರೆ. ನಮ್ಮ ಮಾತಿಗೆ ಅವರು ಬೆಲೆ ಕೊಡುತ್ತಾರೋ ಇಲ್ಲವೋ ಗೊತ್ತಿಲ್ಲ. ವೈ. ಎಸ್​.ವಿ.ದತ್ತ ಅವರು ಈ ವಿಷಯವನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ. ರಾಗಿ ಬೆಳೆಗಾರರಲ್ಲಿ ಸಣ್ಣ ರೈತರು, ದೊಡ್ಡ ರೈತರು ಎಂಬ ಭೇದ ಮಾಡಬಾರದು. ಈ ವಿಷಯವನ್ನು ಮುಖ್ಯಮಂತ್ರಿಗೆ ಮನವರಿಕೆ ಮಾಡಿಕೊಡಲು ಯತ್ನಿಸುತ್ತೇನೆ ಎಂದರು.

ಕೇಂದ್ರ ಸರ್ಕಾರವು ಬೆಂಬಲ ಬೆಲೆಯನ್ನು ನೆಪಮಾತ್ರಕ್ಕೆ 52 ರೂಪಾಯಿ ಹೆಚ್ಚಳ ಮಾಡಿದ್ದಾರೆ. ನಾನು ನಿರಂತರವಾಗಿ ರೈತರ ಪರವಾಗಿ ಹೋರಾಡಲು ಸಿದ್ಧನಿದ್ದೇನೆ. ರೈತರಿಗೆ ಅನ್ಯಾಯವಾದಾಗ ಅವರ ಪರವಾಗಿ ನಿಲ್ಲುತ್ತೇನೆ. ಪ್ರತಿ ಕ್ವಿಂಟಲ್ ರಾಗಿಗೆ 4 ಸಾವಿರ ರೂಪಾಯಿಯನ್ನಾದರೂ ಬೆಂಬಲ ಕೊಡಬೇಕು ಎಂದು ದೊಡ್ಡಗೌಡರು ಒತ್ತಾಯಿಸಿದರು. ಅಲ್ಲದೆ ಇದೇ ತಿಂಗಳ 20ರಂದು ದೆಹಲಿಗೆ ಹೋಗುತ್ತೇನೆ. ಪ್ರಧಾನಮಂತ್ರಿಯ ಭೇಟಿಗೆ ಸಮಯ ಕೇಳುತ್ತೇನೆ. ಭೇಟಿಗೆ ಅವಕಾಶ ಸಿಕ್ಕರೆ ರೈತರ ಸಮಸ್ಯೆಗಳನ್ನು ಅವರ ಗಮನಕ್ಕೆ ತರಲು ಪ್ರಯತ್ನ ಮಾಡುತ್ತೇನೆ ಎಂದರು.

Leave a Reply

Your email address will not be published.