ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಜಿಲ್ಲೆ

ಹುಬ್ಬಳ್ಳಿ : ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ಸಚಿವ ಈಶ್ವರಪ್ಪ ಅವರ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಂದು ಪ್ರತಿಭಟನೆ ನಡೆಸಿತು.

ಕಾಂಗ್ರೆಸ್ ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪ್ರತಿಕೃತಿ ದಹನ ಮಾಡಿ ಕಾಂಗ್ರೆಸ್ ವಿರುದ್ದ ಘೋಷಣೆ ಕೂಗಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಮಾತನಾಡಿ, ಕಾಂಗ್ರೆಸ್ ಪಕ್ಷ ಈಶ್ವರಪ್ಪ ಅವರ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದು ಖಂಡನೀಯವಾಗಿದೆ. ಅಲ್ಲದೇ ‌ ಸುಖಾಸುಮ್ಮನೆ ಕಲಾಪ ಹಾಳು ಮಾಡಿದ್ದಾರೆ. ರಾಷ್ಟ್ರ ಧ್ವಜ ಹಿಡಿದುಕೊಂಡು ಕಾಂಗ್ರೆಸ್ ಹೋರಾಟ ಮಾಡಿದ್ದು, ಕಾಂಗ್ರೆಸ್ ನಿಂದ ಬಿಜೆಪಿಯವರು ಕಲಿಯಬೇಕಾದ್ದು ಏನೂ ಇಲ್ಲ ಎಂದರು.

ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಎಸ್.ಡಿ.ಪಿ.ಐ ಭಯೋತ್ಪಾದಕ ಸಂಘಟನೆಗಳು ಆಗಿದ್ದು ಎಂದು ಹೇಳಿದರೂ ತಪ್ಪಾಗಲಿಕ್ಕಿಲ್ಲ, ರಾಜ್ಯದಲ್ಲಿ ಗಲಭೆಗೆ ಕುಮ್ಮುಕ್ಕು ನೀಡುತ್ತಿದೆ ಎಂದು ಆರೋಪಿಸಿದರು. ವಿ.ಪ. ಸದಸ್ಯ ಪ್ರದೀಪ್ ಶೆಟ್ಟರ್, ಮಲ್ಲಪ್ಪ ಶಿರಕೋಳ ಸೇರಿದಂತೆ ಉಪಸ್ಥಿತರಿದ್ದರು.

Leave a Reply

Your email address will not be published.