ಸಚಿವ ಕೆ ಎಸ್ ಈಶ್ವರಪ್ಪ ಅವರ ಪರ ವಕೀಲಿಕೆ ಮಾಡುತ್ತಿಲ್ಲ: ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು

ಬೆಂಗಳೂರು: ರಾಷ್ಟ್ರಧ್ವಜದ ವಿಷಯದಲ್ಲಿ ನಾನು ಸಚಿವ ಕೆ ಎಸ್ ಈಶ್ವರಪ್ಪ ಅವರ ಪರ ವಕೀಲಿಕೆ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಈ ಸಂಬಂಧ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ನಾನು ಇರುವ ವಿಷಯವನ್ನು ಇದ್ದ ಹಾಗೆ ಹೇಳಿದ್ದೇನೆ. ಈಶ್ವರಪ್ಪ ಅವರು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ  ಸಹಜವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರೇನೂ ದ್ವಜಕ್ಕೆ ಅಪಮಾನ ಆಗುವಂತಹ ಹೇಳಿಕೆ ಕೊಟ್ಟಿಲ್ಲ. ಹಾಗಂತ ನಾನೇನೂ ಈಶ್ವರಪ್ಪ ಪರ ವಕೀಲಿಕೆ ಮಾಡುತ್ತಿಲ್ಲ ಎಂದರು. ದ್ವಜದ ಬಗ್ಗೆ ಅಷ್ಟೊಂದು ಹೇಳುವ  ಕಾಂಗ್ರೆಸ್ ನಾಯಕರು, ಸದನದ ಬಾವಿಯಲ್ಲಿ ರಾಷ್ಟ್ರಧ್ವಜ ಹಾರಿಸುತ್ತ ಪ್ರತಿಭಟನೆ ಮಾಡಿದರು. ಇದು ರಾಷ್ಟ್ರಧ್ವಜಕ್ಕೆ ನೀಡುವ ಗೌರವವೇ? ಸುಖಾ ಸುಮ್ಮನೆ ಸದನದ ಕಲಾಪ ವ್ಯರ್ಥ ಮಾಡದೇ ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಿ ಹೋರಾಟ ಮಾಡಲಿ ಎಂದು ಎಚ್ ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

Leave a Reply

Your email address will not be published.