ಒಂದೇ ಮರಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕಿ-ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ..!

ಜಿಲ್ಲೆ

ಶ್ರೀನಿವಾಸಪುರ :ಯುವಕ ಹಾಗೂ ಅಪ್ರಾಪ್ತ ಬಾಲಕಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಯಲವಳ್ಳಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಗಂಗಾಧರ್ ಹಾಗೂ ನಿಕಿತಾ ಆತ್ಮಹತ್ಯೆಗೆ ಶರಣಾದವರು,ಆತ್ಮಹತ್ಯೆಗೆ ನಿಖರ  ಮಾಹಿತಿ ಇನ್ನು ತಿಳಿದು ಬಂದಿಲ್ಲ,ಇಬ್ಬರು ಶ್ರೀನಿವಾಸಪುರ ಪಟ್ಟಣದ ಜಗಜೀವನ ಪಾಳ್ಯ ದವರೆಂದು ತಿಳಿದುಬಂದಿದೆ, ನಿಕಿತಾ 10ನೇ ತರಗತಿ ವಿದ್ಯಾರ್ಥಿ ಶಾಲಾ ಸಮವಸ್ತ್ರದಲ್ಲಿ ನೇಣಿಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರ ಬೇಟಿ  ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published.