ಮಿಸೆಸ್ ಇಂಡಿಯಾ ಪಟ್ಟ ಅಲಂಕರಿಸಿದ ಗೊಂಬೆ ನಿವೇದಿತಾ ಗೌಡ…!

ಚಲನಚಿತ್ರ

ಬಿಗ್‍ಬಾಸ್ ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದಿರುವ ನಿವೇದಿತಾ ಗೌಡ, ರ‍್ಯಾಪರ್ ಚಂದನ್ ಶೆಟ್ಟಿ ಅವರ ಜೊತೆ ಸಪ್ತಪದಿ ತುಳಿದು ಸಾಂಸಾರಿಕ ಜೀವನದಲ್ಲಿ ಖುಷಿಯಾಗಿ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಆಗಿರುವ ಇವರು ಯಾವಾಗಲೂ ಸುದ್ದಿಯಲ್ಲಿ ಇರುತ್ತಾರೆ. ಕಳೆದ 2 ತಿಂಗಳಿಂದ ಮಿಸೆಸ್ ಇಂಡಿಯಾ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದ ಇವರು ಈಗ ಗೆಲುವಿನ ನಗೆ ಬೀರಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಪ್ಡೇಟ್‍ಗಳ ಬಗ್ಗೆ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಳ್ಳುತ್ತಿರುವ ಮುದ್ದು ಬೊಂಬೆ ನಿವೇದಿತಾ ಗೌಡ ಈಗ ಮಿಸೆಸ್ ಇಂಡಿಯಾ ಆಗಿದ್ದಾರೆ. ಮಿಸೆಸ್ ಇಂಡಿಯಾ ಆಗಲು ಅವರು ಮಾಡುತ್ತಿದ್ದ ತಯಾರಿಗಳ ಬಗ್ಗೆಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದ ನಿವೇದಿತಾ ಗೆಲುವಿನ ಕಿರೀಟವನ್ನು ತಮ್ಮ ಮುಡಿಗೆ ಏರಿಸಿಕೊಂಡಿದ್ದಾರೆ

ಮಿಸೆಸ್ ಇಂಡಿಯಾ ಆಗಿರುವ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ ನಿವೇದಿತಾ ತಂಡ, ಕೊನೆಗೂ ಜನರ ಹೃದಯವನ್ನು ಗೆದ್ದು ಅವರಿಗೆ ಇಷ್ಟವಾಗುವಂತೆ ಮಾಡುವುದು ನಿಜವಾದ ಸಾಧನೆ, ಅಲ್ಲವೇ? ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022 ರ ವಿಜೇತರಾದ ಶ್ರೀಮತಿ ನಿವೇದಿತಾ ಗೌಡ ಅವರು ನಮ್ರತೆಯಿಂದ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದಾರೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

 

Leave a Reply

Your email address will not be published.