ನನ್ನ ಮತ್ತು ಸಿದ್ದರಾಮಯ್ಯರನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಗೆ ನಿದ್ದೆ ಬರುವುದಿಲ್ಲ: KPCC ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು

ಬೆಂಗಳೂರು: ನನ್ನ ಮತ್ತು ಸಿದ್ದರಾಮಯ್ಯರನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಗೆ ನಿದ್ದೆ ಬರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯನವರ ಹುಟ್ಟುಹಬ್ಬ ಕಾರ್ಯಕ್ರಮ ನಂತರ ಕಾಂಗ್ರೆಸ್ ಹೋಳಾಗಲಿದೆ ಎಂಬ ಪ್ರಶ್ನೆಗೆ ಸದಾಶಿವ ನಗರದಲ್ಲಿ ಮಾತನಾಡಿದ ಡಿಕೆಶಿ, ‘ಕಾಂಗ್ರೆಸ್ ಪಕ್ಷ ಒಡೆದು ಹೋಳಾಗಲು ಕುಂಬಳಕಾಯಿಯು ಅಲ್ಲ, ಮಡಿಕೆಯೂ ಅಲ್ಲ. ಬಿಜೆಪಿಯವರು ನಿತ್ಯ ಮಲಗುವ ಮುನ್ನ ನಮ್ಮನ್ನು ನೆನಪಿಸಿಕೊಳ್ಳಬೇಕು.

ಅವರು ನಮ್ಮನ್ನು ಬಹಳ ಪ್ರೀತಿಸುತ್ತಾರೆ. ಹೀಗಾಗಿ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ’ ಎಂದು ಛೇಡಿಸಿದರು. ಆಗ್ನಿಪತ್ ಯೋಜನೆ ವಿರೋಧಿಸುವವರು ದೇಶ ವಿರೋಧಿಗಳು ಎಂಬ ಹೇಳಿಕೆ ಕುರಿತು ಕೇಳಿದಾಗ, ‘ ಅವರು ರಾಷ್ಟ್ರೀಯವಾದಿ ಅಲ್ಲವೇ, ಅವರು ಮೊದಲು ತಮ್ಮ ಮಕ್ಕಳನ್ನು ಈ ಯೋಜನೆ ಮೂಲಕ ಸೇನೆಗೆ ಸೇರಿಸಲಿ. ಬಿಜೆಪಿ ಮಂತ್ರಿಗಳು ಮೊದಲು ತಮ್ಮ ಮಕ್ಕಳನ್ನು ಸೇರಿಸಿ ನಾಲ್ಕು ವರ್ಷ ದೇಶ ಸೇವೆ ಮಾಡಿಸಲಿ. ಅವರ ಮಕ್ಕಳು ಮಾತ್ರ ಡಾಕ್ಟರ್, ಇಂಜಿನಿಯರ್, ಉದ್ಯಮಿಗಳಾಗಬೇಕು. ಬಡವರ ಮಕ್ಕಳು ಗಾರ್ಡ್ ಕೆಲಸಕ್ಕೆ ಸೇರಬೇಕಾ?’ ಎಂದು ಪ್ರಶ್ನಿಸಿದರು.

Leave a Reply

Your email address will not be published.