ಮೈಸೂರು ದಸರಾ ಮಹೋತ್ಸವ: ಜಂಬೂಸವಾರಿಗೆ ಸಿದ್ದವಾದ ಗಜಪಡೆ

ಜಿಲ್ಲೆ

ಮೈಸೂರು :ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಆನೆಗಳ ಪಟ್ಟಿ ಕೂಡ ಅಂತಿಮಗೊಂಡಿದೆ. ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಕಾಲಿಡಲಿದ್ದು,  4 ಹೆಣ್ಣಾನೆಗಳು ಸೇರಿದಂತೆ 14 ಅನೆಗಳ ಪಟ್ಟಿ ಅಂತಿಮಗೊಂಡಿದೆ. ಮತ್ತಿಗೋಡು ಆನೆ ಶಿಬಿರದಿಂದ 39 ವರ್ಷದ ಗೋಪಾಲಸ್ವಾಮಿ, 57 ವರ್ಷದ ಅಭಿಮನ್ಯು, 22 ವರ್ಷ ಭೀಮ, 38 ವರ್ಷದ ಮಹೇಂದ್ರ, ಬಳ್ಳೆ ಆನೆ ಶಿಬಿರದಿಂದ 63 ವರ್ಷದ ಅರ್ಜುನ  ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿವೆ.

ದುಬಾರೆ ಆನೆ ಶಿಬಿರದಿಂದ 59 ವರ್ಷದ ವಿಕ್ರಮ, 44 ವರ್ಷದ ಧನಂಜಯ, 45 ವರ್ಷದ ಕಾವೇರಿ, 41 ವರ್ಷದ ಗೋಪಿ, 40 ವರ್ಷದ ಶ್ರೀರಾಮ, 63 ವರ್ಷದ ವಿಜಯಾ ಆನೆ, ರಾಮಾಪುರ ಆನೆ ಶಿಬಿರದಿಂದ 49 ವರ್ಷದ ಚೈತ್ರಾ, 21 ವರ್ಷದ ಲಕ್ಷ್ಮೀ, 18 ವರ್ಷದ ಪಾರ್ಥಸಾರಥಿ ಆನೆ ಆಗಮಿಸಲಿವೆ. ಆಗಸ್ಟ್ 7 ರಂದು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಅರಣ್ಯ ವ್ಯಾಪ್ತಿಯ ದೊಡ್ಡಹೆಜ್ಜೂರು ಗ್ರಾಮದಿಂದ ಗಜಪಯಣ ಆರಂಭವಾಗಲಿದೆ. ಮೊದಲ ತಂಡದಲ್ಲಿ  9 ಆನೆಗಳು ಮೈಸೂರಿಗೆ ಆಗಮಿಸಲಿವೆ.

 

Leave a Reply

Your email address will not be published.