ಎನ್ ಕೌಂಟರ್ ಗೆ ಬಲಿಯಾದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಕೊಲೆ ಮಾಡಿದ್ದ ಭಯೋತ್ಪಾದಕ

ರಾಷ್ಟ್ರೀಯ

ಶ್ರೀನಗರ: ಕಾಶ್ಮೀರಿ ಪಂಡಿತರುಗಳಾದ ರಾಹುಲ್ ಭಟ್, ಅಮರೀನ್ ಭಟ್ ಸೇರಿದಂತೆ ಹಲವು ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಲತೀಫ್ ರಾಥರ್ ನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲತೀಫ್ ರಾಥರ್ ಸೇರಿದಂತೆ ಮೂವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಮೃತಪಟ್ಟಿದ್ದಾರೆ.

ಅಡಗಿ ಕುಳಿತಿದ್ದ ಮೂವರು ಎಲ್‌ಇಟಿ ಭಯೋತ್ಪಾದಕರ ಮೇಲೆ ಎನ್‌ಕೌಂಟರ್ ಮಾಡಲಾಗಿದ್ದು, ಮೃತದೇಹಗಳನ್ನು ಪಡೆಯಲಾಗಿದೆ. ಅಲ್ಲದೆ ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದಿನ ಎನ್‌ಕೌಂಟರ್ ದೊಡ್ಡ ಯಶಸ್ಸನ್ನು ತಂದಿದೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಹೇಳಿದ್ದಾರೆ.

ಬದ್ಗಾಮ್‌ನಲ್ಲಿ ಕಂದಾಯ ಇಲಾಖೆಯ ಉದ್ಯೋಗಿಯಾಗಿದ್ದ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಮೇಲೆ ಮೇ ತಿಂಗಳಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಘಟನೆಯ ಬಳಿಕ ಕಾಶ್ಮೀರಿ ಪಂಡಿತ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.

Leave a Reply

Your email address will not be published.