ಸಮಾಜಘಾತುಕರನ್ನು ಎನ್ಕೌಂಟರ್ ಮಾಡುವುದೇ ಸರಿಯಾದ ಕ್ರಮ: ಶಾಸಕ ಎಂ ಪಿ ರೇಣುಕಾಚಾರ್ಯ

ಬೆಂಗಳೂರು

ಬೆಂಗಳೂರು: ಸಮಾಜಘಾತುಕರನ್ನು ಎನ್ಕೌಂಟರ್ ಮಾಡುವುದೇ ಸರಿಯಾದ ಕ್ರಮ ಎಂದು ಶಾಸಕ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯದಲ್ಲಿ ಕೆಲವು ಮತೀಯ ಶಕ್ತಿಗಳು ಹಿಂದೂ ಯುವ ಕರನ್ನು ಗುರಿಯಾಗಿಟ್ಟುಕೊಂಡುಕಗ್ಗೊಲೆ ಮಾಡುವಂತಹ ಹೀನ ಕೃತ್ಯ ನಡೆಸುತ್ತಿದ್ದಾರೆ. ಇದರಲ್ಲಿ ಕೆಲವು ಅಂತಾರಾಷ್ಟ್ರೀಯ ಭಯೋ ತ್ಪಾದನೆ ಸಂಘಟನೆಗಳ ಕೈವಾಡವಿದೆ. ಯಾರೇ ಆಗಿದ್ದರೂ ಸಹ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿ ಸಿದರು. ಇನ್ನೂ ಮೃತ ಹರ್ಷನ ದೇಹದಲ್ಲಿ ನಮ್ಮದೇ ಹಿಂದೂ ರಕ್ತ ಹರಿಯುತ್ತಿತ್ತು. ಎಲ್ಲ ಮುಸ್ಲಿಮರು ಭಯೋತ್ಪಾದಕರಲ್ಲ. ಘಟನೆಗೆ ಸಂಬಂಧಿಸಿದಂತೆ ನಾನು ಮುಸ್ಲಿಮರ ಬಗ್ಗೆ ಮಾತನಾಡುವುದಿಲ್ಲ. ನಾವು ಮೃಧುಧೋರಣೆ ತಳೆದಿದ್ದೇವೆ. ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಆಕ್ರೋಶ  ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published.