Home District ಸಾರ್ವಜನಿಕ ಆಸ್ಪತ್ರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಧಿಡೀರ್ ಭೇಟಿ; ಪರಿಶೀಲನೆ

ಸಾರ್ವಜನಿಕ ಆಸ್ಪತ್ರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಧಿಡೀರ್ ಭೇಟಿ; ಪರಿಶೀಲನೆ

ಕೃಷ್ಣರಾಜಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಧಿಡೀರ್ ಭೇಟಿ; ಪರಿಶೀಲನೆ

355
0

ಕೃಷ್ಣರಾಜಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಎಂ.ಎಸ್.ಜಯಂತ್ ಅವರಿಂದ ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದ ಸಚಿವ ನಾರಾಯಣಗೌಡ ಕೋವಿಡ್ ಸೋಂಕಿತರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ನೀಡಿ ಆರೈಕೆ ಮಾಡುವಂತೆ ನಿರ್ದೇಶನ ನೀಡಿದರು.

ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಾಗಿ ಬೇಕಾದ ಆಕ್ಸಿಜನ್ ಸಿಲಿಂಡರ್ ಗಳು ಮತ್ತು ರೆಮಿಡಿಸಿವರ್ ಲಸಿಕೆಯ ದಾಸ್ತಾನನ್ನು ನಿಗಧಿತ ಪ್ರಮಾಣದಲ್ಲಿ ದಾಸ್ತಾನು ಇಟ್ಟುಕೊಂಡು ರೋಗಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಗುಣಮಟ್ಟದ ಊಟ ಮತ್ತು ತಿಂಡಿಯನ್ನು ಸೋಂಕಿತರಿಗೆ ಕೊಡಿಸಿ ಆರೋಗ್ಯ ಸಂವರ್ಧನೆಗೆ ನೆರವಾಗಿ ಸೋಂಕಿತರಿಗೆ ಆತ್ಮವಿಶ್ವಾಸವನ್ನು ತುಂಬುವ ಮೂಲಕ ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಮನೆಗೆ ತೆರಳುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಂಕಿತರಿಗೆ ನೀಡುತ್ತಿರುವ ಗುಣಮಟ್ಟದ ಆಹಾರ ಮತ್ತು ವೈದ್ಯಕೀಯ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್, ತಜ್ಞ ವೈದ್ಯರಾದ ಡಾ.ಶ್ರೀಕಾಂತ್, ಡಾ.ಜಯಪ್ರಕಾಶ್, ಡಾ.ಪ್ರಿಯಾಂಕಾ, ಸಚಿವರ ಆಪ್ತಸಹಾಯಕರಾದ ದಯಾನಂದ, ಕಿಕ್ಕೇರಿ ಕುಮಾರ್, ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಕೆ.ದೀಪಕ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಶೋಕ್, ಮುಖಂಡರಾದ ಮಹದೇವೇಗೌಡ, ಕಟ್ಟೇಕ್ಯಾತನಹಳ್ಳಿ ಪಾಪಣ್ಣ ಮತ್ತಿತರರು ಉಪಸ್ಥಿತರಿದ್ದರು.

VIAಕೃಷ್ಣರಾಜಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಧಿಡೀರ್ ಭೇಟಿ; ಪರಿಶೀಲನೆ
SOURCEಕೃಷ್ಣರಾಜಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಧಿಡೀರ್ ಭೇಟಿ; ಪರಿಶೀಲನೆ
Previous articleಕಡಲ ಅಬ್ಬರಕ್ಕೆ ಸಿಲುಕಿದ ಬೋಟ್ ಪತ್ತೆ!
Next articleಮೀನುಕಟ್ಟೆ ಕೆಸರಿನಲ್ಲಿ ಸಿಲುಕಿದ್ದ ಆನೆ ಮರಿಯನ್ನು ರಕ್ಷಿಸಿದ ಅರಣ್ಯ ಇಲಾಖೆ

LEAVE A REPLY

Please enter your comment!
Please enter your name here