
ನವೀನ್ ಮೃತದೇಹ ಉಕ್ರೇನಿನ ಶವಾಗಾರದಲ್ಲಿ ಇಡಲಾಗಿದೆ: ಸಿಎಂ ಬಸವರಾಜ್ ಬೊಮ್ಮಾಯಿ
ಬೆಂಗಳೂರು: ಉಕ್ರೇನ್ ನಲ್ಲಿ ಸಾವನ್ನಪ್ಪಿದ ಕನ್ನಡಿಗ ನವೀನ್ ಮೃತದೇಹ ತರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸಂಬಂಧ ಕೇಂದ್ರ ಸಚಿವ ಜೈಶಂಕರ್ ಅವರ ಜೊತೆ ಮಾತಾಡಿದ್ದೇನೆ. ನವೀನ್ ಮೃತದೇಹ ಸಿಕ್ಕಿದ್ದು, ಉಕ್ರೇನಿನ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ. ಯುದ್ಧ ಇನ್ನೂ ನಡೀತಿದೆ. ರಾಯಭಾರಿ ಕಚೇರಿ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇವೆ. ಮೃತದೇಹ ತರುವ ಬಗ್ಗೆ ಮಾತುಕತೆ ನಡೆಸ್ತಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.