108ರ ಆ್ಯಂಬುಲೆನ್ಸ್ ಸೇವೆಗೆ ಹೊಸ ರೂಪ: ವಿಶ್ವದರ್ಜೆಯ ಆ್ಯಂಬುಲೆನ್ಸ್ ಸೇವೆ ಒದಗಿಸಲು ನಿರ್ಧಾರ

ಬೆಂಗಳೂರು

ಬೆಂಗಳೂರು: 108ರ ಆ್ಯಂಬುಲೆನ್ಸ್ ಸೇವೆಯನ್ನು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮೇಲ್ದರ್ಜೆಗೇರಿಸುವ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ  ಅನುಮೋದನೆ ನೀಡಿದೆ ಎಂದು  ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 108 ರ ಆರೋಗ್ಯ ಕವಚವು ತುರ್ತು ಆರೋಗ್ಯ ಸೇವೆಯನ್ನು ನೀಡುತ್ತಿದೆ. ಆಧುನಿಕ ಕಾಲದ ಆರೋಗ್ಯ ಸೇವೆಯ ಬೇಡಿಕೆಗಳಿಗೆ ಅನುಗುಣವಾಗಿ ಆಂಬ್ಯುಲೆನ್ಸ್ ಸೇವೆಯನ್ನು ಉನ್ನತೀಕರಿಸುವ ಅಗತ್ಯತೆ ಕಂಡುಬಂದಿದೆ. ಹೀಗಾಗಿ ಹೊಸ ಮಾದರಿಯ ಆಂಬ್ಯುಲೆನ್ಸ್ ಸೇವೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆಧುನಿಕ ತಂತ್ರಜ್ಞಾನಗಳ ಬಳಕೆ, ಹೊಸ ಸುಧಾರಣಾ ಕ್ರಮಗಳನ್ನು ಆಂಬ್ಯುಲೆನ್ಸ್ ಸೇವೆಯಲ್ಲಿ ತರುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published.